ಗುರುವಾರ , ಅಕ್ಟೋಬರ್ 22, 2020
22 °C

ಮಧ್ಯಪ್ರದೇಶದಲ್ಲಿ ರಸ್ತೆ ಅಪಘಾತ: ಆರು ಕಾರ್ಮಿಕರು ಸಾವು, 24 ಮಂದಿಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

ಧಾರ್‌:  ಕೃಷಿ ಕಾರ್ಮಿಕರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟು, 24 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಧಾರ್‌ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ.

ಇಂದೋರ್‌–ಅಹಮದಾಬಾದ್‌ ರಸ್ತೆಯಲ್ಲಿರುವ ಚಿಕ್ಲ್ಯಾಫತಾ ಬಳಿ ಅಪಘಾತ ಸಂಭವಿಸಿದೆ. ಗಾಯಗೊಂಡ 24 ಮಂದಿಯಲ್ಲಿ ಒಂಬತ್ತು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶೈಲೇಂದ್ರ ಸೋಲಂಕಿ ಮಾಹಿತಿ ನೀಡಿದರು.

ವ್ಯಾನ್‌ನ ಒಂದು ಚಕ್ರ ಪಂಚರ್‌ ಆಗಿತ್ತು. ಆ  ಚಕ್ರವನ್ನು ಬದಲಾಯಿಸುತ್ತಿದ್ದ ವೇಳೆ ವೇಗವಾಗಿ ಬಂದ ಟ್ರಕ್‌ವೊಂದು ಹಿಂದಿನಿಂದ ವ್ಯಾನಿಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು