ಬುಧವಾರ, ಜೂನ್ 16, 2021
27 °C

VIDEO: ಮಧ್ಯಪ್ರದೇಶ: ಬಸ್‌ ನಿಲ್ದಾಣದಲ್ಲಿ ಬೆಂಕಿ, ಏಳು ಬಸ್‌ಗಳು ಭಸ್ಮ

ಏಜನ್ಸೀಸ್ Updated:

ಅಕ್ಷರ ಗಾತ್ರ : | |

ಮಧ್ಯಪ್ರದೇಶ: ದಮೋಹ್ ಬಸ್‌ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಏಳು ಬಸ್‌ಗಳು ಸುಟ್ಟು ಹೋಗಿವೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

‘ಬಸ್‌ ನಿಲ್ದಾಣದಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಒಂದು ಬಸ್ಸಿನಿಂದ ಮತ್ತೊಂದು ಬಸ್ಸಿಗೆ ಬೆಂಕಿ ಆವರಿಸಿದೆ’ ಎಂದು ಸ್ಥಳೀಯರು ತಿಳಿಸಿದ್ದಾರೆ.

‘ಸದ್ಯ ಬೆಂಕಿಯನ್ನು ನಂದಿಸಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂಬುದನ್ನು ಪತ್ತೆ ಹಚ್ಚಲು ತನಿಖೆ ನಡೆಸಲಾಗುತ್ತಿದೆ’ ಎಂದು ನಗರ ಪೊಲೀಸ್‌ ವರಿಷ್ಠಾಧಿಕಾರಿ (ಸಿಎಸ್‌ಪಿ) ಅಭಿಷೇಕ್ ತಿವಾರಿ ಹೇಳಿದ್ದಾರೆ.

ಇದನ್ನೂ ಓದಿ... ರಾಜ್ಯಸಭೆಯಲ್ಲಿ ರಾಷ್ಟ್ರ ರಾಜಧಾನಿ (ತಿದ್ದುಪಡಿ) ಮಸೂದೆ ಅಂಗೀಕಾರ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು