ಬಾಲಘಾಟ್: ಇಬ್ಬರು ಟ್ರೈನಿ ಪೈಲಟ್ಗಳಿದ್ದ ತರಬೇತಿ ನಿರತ ವಿಮಾನವೊಂದು ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ಶನಿವಾರ ಪತನಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಾಘಾಟ್ ಜಿಲ್ಲಾ ಕೇಂದ್ರದಿಂದ ಸುಮಾರು 40 ಕಿ.ಮೀ ದೂರದ ಲಾಂಜಿ ಮತ್ತು ಕಿರ್ನಾಪುರ್ನ ಪರ್ವತ ಪ್ರದೇಶದಲ್ಲಿ ದುರ್ಘಟನೆ ಸಂಭವಿಸಿದ್ದು, ಸ್ಥಳದಲ್ಲಿ ಸುಟ್ಟ ಮೃತದೇಹವೊಂದು ಪತ್ತೆಯಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಸೌರಭ್ ಸಂಜೆ ಪಿಟಿಐಗೆ ತಿಳಿಸಿದರು.

ನಾಪತ್ತೆಯಾಗಿರುವ ಮತ್ತೊಬ್ಬ ಪೈಲಟ್ಗಾಗಿ ಹುಡುಕಾಟ ನಡೆಯುತ್ತಿದೆ. ಸುಟ್ಟು ಕರಕಲಾಗಿರುವ ದೇಹವನ್ನು ಗುರುತಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಹೇಳಿದರು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬಾಲಾಘಾಟ್ ಗಡಿಯಲ್ಲಿರುವ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಬಿರ್ಸಿ ವಿಮಾನ ನಿಲ್ದಾಣದಿಂದ ತರಬೇತುದಾರ ವಿಮಾನ ಟೇಕಾಫ್ ಆಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.