ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ಪದ್ಮಶ್ರೀ ಪುರಸ್ಕೃತ ಹಿರಿಯ ಪತ್ರಕರ್ತ ಅಭಯ್ ಛಜಲಾನಿ ನಿಧನ

Last Updated 23 ಮಾರ್ಚ್ 2023, 7:36 IST
ಅಕ್ಷರ ಗಾತ್ರ

ಇಂದೋರ್: ಹಿರಿಯ ಪತ್ರಕರ್ತ ಮತ್ತು ಪದ್ಮಶ್ರೀ ಪುರಸ್ಕೃತ ಅಭಯ್ ಛಜಲಾನಿ ಅವರು ದೀರ್ಘಕಾಲದ ಅನಾರೋಗ್ಯದಿಂದ ಗುರುವಾರ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.

88 ವರ್ಷದ ಛಜಲಾನಿ ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಹಿರಿಯ ಪತ್ರಕರ್ತ ಛಜಲಾನಿ ಬಹಳ ದಿನಗಳಿಂದ ಅಸ್ವಸ್ಥರಾಗಿದ್ದು, ಕಳೆದ ಎರಡು ತಿಂಗಳಿಂದ ಹಾಸಿಗೆ ಹಿಡಿದಿದ್ದರು. ಅವರು ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಹಿಂದಿ ದಿನಪತ್ರಿಕೆ ನಯೀದುನಿಯಾದ ಸಂಪಾದಕೀಯ ಮಂಡಳಿಯ ಅಧ್ಯಕ್ಷರಾಗಿದ್ದ ಛಜಲಾನಿ ಅವರು ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಗಾಗಿ 2009 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಭಾಜನರಾಗಿದ್ದರು. ಅವರು ಇಂಡಿಯನ್ ಲ್ಯಾಂಗ್ವೇಜ್ ನ್ಯೂಸ್ ಪೇಪರ್ ಅಸೋಸಿಯೇಷನ್ ​​(ILNA) ಮತ್ತು ಇಂಡಿಯನ್ ನ್ಯೂಸ್ ಪೇಪರ್ ಸೊಸೈಟಿ (INS) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT