ಡಯಾಲಿಸಿಸ್‌ಗೆಂದು ಆಸ್ಪತ್ರೆಗೆ ಬಂದಿದ್ದ ಮಹಿಳೆ ಮೇಲೆ ವಾರ್ಡ್‌ಬಾಯ್ ಅತ್ಯಾಚಾರ

ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ 50 ವರ್ಷದ ಮಹಿಳಾ ರೋಗಿಯ ಮೇಲೆ ವಾರ್ಡ್‌ಬಾಯ್ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಜುಲೈ 28ರಂದು ಮಹಾರಾಜ ಯಶ್ವಂತ್‌ರಾವ್ ಆಸ್ಪತ್ರೆಯಲ್ಲಿ (ಎಂವೈಎಚ್) ಘಟನೆ ನಡೆದಿದ್ದು, ಸೋಮವಾರ ರಾತ್ರಿ ಪರಾರಿಯಾಗಿರುವ 32 ವರ್ಷದ ಆರೋಪಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಸಂಯೋಗಿತಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ರಾಜೀವ್ ತ್ರಿಪಾಠಿ ತಿಳಿಸಿದ್ದಾರೆ.
ನೆರೆಯ ಧಾರ್ ಜಿಲ್ಲೆಯ ನಿವಾಸಿಯಾದ ಮಹಿಳೆಯು ಜುಲೈ 28ರಂದು ಎಂವೈಎಚ್ ಆಸ್ಪತ್ರೆಗೆ ಡಾಯಲಿಸಿಸ್‌ಗೆಂದು ಬಂದಿದ್ದರು. ಈ ವೇಳೆ ವಾರ್ಡ್ ಬಾಯ್ ಬಟ್ಟೆ ಬದಲಾಯಿಸಲೆಂದು ಆಕೆಯನ್ನು ಪ್ರತ್ಯೇಕ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆಕೆಯು ವಿರೋಧಿಸಿದಾಗ, ಆರೋಪಿಯು ಸಾಮಾಜಿಕ ಕಳಂಕದ ಭಯವನ್ನು ಹುಟ್ಟಿಸಿದ್ದಾನೆ ಮತ್ತು ಆಕೆ ಪೊಲೀಸರಿಗೆ ದೂರು ನೀಡುವುದನ್ನು ತಪ್ಪಿಸಲು ಎರಡು ದಿನಗಳ ಕಾಲ ಆಸ್ಪತ್ರೆಯ ಖಾಸಗಿ ವಾರ್ಡ್‌ಗೆ ದಾಖಲಿಸಿದ್ದಾನೆ. ನಂತರ, ಮಹಿಳೆಗೆ 1,000 ರೂ.ಗಳನ್ನು ನೀಡಿ ಮನೆಗೆ ವಾಪಸ್ ಕಳುಹಿಸಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಅದಾದ ಎರಡು ದಿನಗಳ ಬಳಿಕ ಮಹಿಳೆ ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅದೇ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ. ಫಟನೆ ಬೆಳಕಿಗೆ ಬಂದ ನಂತರ, ಪೊಲೀಸರು ಐಪಿಸಿ ಸೆಕ್ಷನ್ ಅಡಿಯಲ್ಲಿ ಅತ್ಯಾಚಾರದ ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾಗಿರುವ ಆರೋಪಿ ಪತ್ತೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.