ಗುರುವಾರ , ಡಿಸೆಂಬರ್ 1, 2022
25 °C

ಆರ್‌ಎಸ್ಎಸ್ ಪಥಸಂಚಲನಕ್ಕೆ ಅವಕಾಶ ನೀಡಿ: ತಮಿಳುನಾಡು ಪೊಲೀಸರಿಗೆ ಹೈಕೋರ್ಟ್ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ನವೆಂಬರ್‌ 6ರಂದು ಪಥಸಂಚಲನ ನಡೆಸಲು ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (ಆರ್‌ಎಸ್‌ಎಸ್‌) ಅವಕಾಶ ನೀಡುವಂತೆ ತಮಿಳುನಾಡು ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಸೂಚಿಸಿದೆ.

ಗಾಂಧಿ ಜಯಂತಿ ದಿನ (ಅಕ್ಟೋಬರ್‌ 2ರಂದು) ಆರ್‌ಎಸ್‌ಎಸ್‌ ನಡೆಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಜಿಲ್ಲಾಡಳಿತ ಅವಕಾಶ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ, ಆರ್‌ಎಸ್‌ಎಸ್‌ ತಿರುವಳ್ಳೂರ್‌ ಜಿಲ್ಲಾ ಜಂಟಿ ಕಾರ್ಯದರ್ಶಿ ಆರ್‌. ಕಾರ್ತಿಕೇಯನ್‌ ಮೇಲ್ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ಕೆ.ಇಳಂಥಿರಾಯನ್‌ ಅವರಿದ್ದ ಪೀಠ ಪೊಲೀಸರಿಗೆ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ತಮಿಳುನಾಡು ಸರ್ಕಾರ

ಆರ್‌ಎಸ್‌ಎಸ್‌ ಅಕ್ಟೋಬರ್‌ 2ರಂದು ನಡೆಸಲು ಯೋಜಿಸಿದ್ದ ಪಥ ಸಂಚಲನಕ್ಕೆ ಹಾಗೂ ಅದೇ ದಿನ ವಿಡುದಲೈ ಚಿರುತೈಗಳ್‌ ಕಟ್ಚಿ (ವಿಸಿಕೆ) ಆಯೋಜಿಸಿದ್ದ ಪ್ರತಿಭಟನೆಗೆ ತಮಿಳುನಾಡು ಸರ್ಕಾರ ಅನುಮತಿ ನಿರಾಕರಿಸಿತ್ತು.

ಅದರ ಬೆನ್ನಲ್ಲೇ ತಮಿಳುನಾಡು ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ, ರಾಜ್ಯದಾದ್ಯಂತ 50 ಕಡೆಗಳಲ್ಲಿ ನಡೆಸಲು ಉದ್ದೇಶಿಸಿದ್ದ ಆರ್‌ಎಸ್‌ಎಸ್‌ ಪಥಸಂಚಲಕ್ಕೆ ಅನುಮತಿ ನಿರಾಕರಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು