ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಐಎಡಿಎಂಕೆ ಮುಖ್ಯ ಕಚೇರಿಯ ಬೀಗದ ಕೈ ಇಪಿಎಸ್‌ಗೆ ಕೊಡುವಂತೆ ಹೈಕೋರ್ಟ್‌ ಸೂಚನೆ

ಅಕ್ಷರ ಗಾತ್ರ

ಚೆನ್ನೈ: ಎಐಎಡಿಎಂಕೆ ಮಧ್ಯಂತರ ಪ್ರಧಾನ ಕಾರ್ಯದರ್ಶಿ ಎಡಪ್ಪಡಿ ಕೆ. ಪಳನಿಸ್ವಾಮಿ ಅವರಿಗೆ ಪಕ್ಷದ ಮುಖ್ಯ ಕಚೇರಿಯ ಬೀಗದ ಕೈಯನ್ನು ಹಸ್ತಾಂತರಿಸುವಂತೆ ಮದ್ರಾಸ್‌ ಹೈಕೋರ್ಟ್‌ ತಮಿಳುನಾಡು ಕಂದಾಯ ಇಲಾಖೆಗೆ ಸೂಚಿಸಿದೆ.

ನ್ಯಾಯಮೂರ್ತಿ ಎನ್‌.ಸತೀಶ್‌ ಕುಮಾರ್‌ ಅವರು ಎಐಎಡಿಎಂಕೆ ಸದಸ್ಯರಿಗೆ ಒಂದು ತಿಂಗಳ ಕಾಲ ಮುಖ್ಯ ಕಚೇರಿಯನ್ನು ಪ್ರವೇಶಿಸದಂತೆ ನಿರ್ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ಗಲಭೆಗಳನ್ನು ಸಂಭವಿಸದಂತೆ ಎಚ್ಚರ ವಹಿಸುವಂತೆ ಪೊಲೀಸರಿಗೆ ನಿರ್ದೇಶಿಸಿದ್ದಾರೆ.

ಪಕ್ಷದ ಮುಖ್ಯ ಕಚೇರಿಗೆ ಬೀಗ ಹಾಕಿರುವುದನ್ನು ಪ್ರಶ್ನಿಸಿ ಇ. ಪಳನಿಸ್ವಾಮಿ ಹಾಗೂ ಉಚ್ಚಾಟಿತ ನಾಯಕ ಒ. ಪನ್ನೀರಸೆಲ್ವಂ ಅವರು ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಜುಲೈ 11ರಂದು ನಡೆದ ಪಕ್ಷದ ಜನರಲ್‌ ಕೌನ್ಸಿಲ್‌ ಸಭೆಯಲ್ಲಿ ಪಕ್ಷದ ಖಜಾಂಚಿ ಹುದ್ದೆ ಮತ್ತು ಪ್ರಾಥಮಿಕ ಸದಸ್ಯತ್ವದಿಂದ ಪನ್ನೀರಸೆಲ್ವಂ ಅವರನ್ನು ಉಚ್ಚಾಟಿಸಲಾಗಿತ್ತು. ಇದರಿಂದ ಕೋಪಗೊಂಡ ಪನ್ನೀರಸೆಲ್ವಂ ಬೆಂಬಲಿಗರು ಪಕ್ಷದ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ಪಳನಿಸ್ವಾಮಿ ಮತ್ತು ಪನ್ನೀರಸೆಲ್ವಂ ಬೆಂಬಲಿಗರ ಮಧ್ಯೆ ಘರ್ಷಣೆ ಏರ್ಪಟ್ಟಿತ್ತು. ಈ ಸಂದರ್ಭದಲ್ಲಿ ಕಂದಾಯ ಅಧಿಕಾರಿಗಳು ಕಚೇರಿಗೆ ಬೀಗ ಹಾಕಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT