ಸೋಮವಾರ, ಆಗಸ್ಟ್ 2, 2021
27 °C

ಇಂದೋರ್‌ನಲ್ಲಿ 16 ತಿಂಗಳ ಬಳಿಕ ಮೊದಲ ಬಾರಿಗೆ 1 ಕೋವಿಡ್ ಪ್ರಕರಣ ದಾಖಲು

ಪಿಟಿಐ Updated:

ಅಕ್ಷರ ಗಾತ್ರ : | |

ಕೋವಿಡ್‌ ವಿರುದ್ಧ ಹೋರಾಟ– ಪ್ರಾತಿನಿಧಿಕ ಚಿತ್ರ

ಇಂದೋರ್‌: ಮಧ್ಯಪ್ರದೇಶದ ಇಂದೋರ್‌ನಲ್ಲಿ 16 ತಿಂಗಳ ಬಳಿಕ, ಶುಕ್ರವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ಮೊದಲ ಬಾರಿಗೆ ಒಂದು ಕೋವಿಡ್ ಪ್ರಕರಣ ವರದಿಯಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಕೋವಿಡ್ 3ನೇ ಅಲೆ ಎದುರಿಸಲು ಸನ್ನದ್ಧವಾಗಿರುವ ಹಾಗೂ ಲಸಿಕಾ ಕಾರ್ಯಕ್ರಮದ ನಡುವೆ ಮಧ್ಯಪ್ರದೇಶದಲ್ಲಿ ದಿನೇದಿನೇ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ.

‘ಕಳೆದ 24 ಗಂಟೆಗಳ ಅವಧಿಯಲ್ಲಿ ನಾವು ಒಟ್ಟು 8,923 ಮಾದರಿಗಳನ್ನು ಪರೀಕ್ಷಿಸಿದ್ದೇವೆ. ಅದರಲ್ಲಿ ಒಂದೇ ಒಂದು ಮಾದರಿಯಲ್ಲಿ ಮಾತ್ರ ಕೋವಿಡ್ ಇರುವುದು ದೃಢಪಟ್ಟಿದೆ. 16 ತಿಂಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಒಂದೇ ಒಂದು ಕೋವಿಡ್ ಪ್ರಕರಣ ವರದಿಯಾಗಿದೆ’ ಎಂದು ಕೋವಿಡ್‌ ನೋಡಲ್ ಅಧಿಕಾರಿ ಡಾ.ಅಮಿತ್ ಮಲಕರ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು