ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಗಾಳದಲ್ಲಿ ಮಾಫಿಯಾ ಆಡಳಿತ: ಬಿಜೆಪಿ

ಬಿಜೆಪಿ ಸತ್ಯಶೋಧನಾ ಸಮಿತಿ ವರದಿ
Last Updated 30 ಮಾರ್ಚ್ 2022, 17:02 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳದ ಬಿರ್‌ಭೂಮ್‌ ಜಿಲ್ಲೆಯ ಬೋಗ್‌ತುಇ ಗ್ರಾಮದಲ್ಲಿ ನೆಡೆದಿದ್ದ ಸಜೀವ ದಹನ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿರುವ ನಡುವೆಯೇ, ಬಿಜೆಪಿಯ ಸತ್ಯಶೋಧನಾ ಸಮಿತಿಯು ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಬುಧವಾರ ಸಲ್ಲಿಸಿದೆ.

‘ಟಿಎಂಸಿ ಆಡಳಿತದಲ್ಲಿ ಪಶ್ಚಿಮ ಬಂಗಾಳದಲ್ಲಿ ಕಾನೂನು, ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಪೊಲೀಸರು ಮತ್ತು ರಾಜಕಾರಣಿಗಳ ಸಹಯೋಗದಲ್ಲಿ ರಾಜ್ಯದಲ್ಲಿ ಮಾಫಿಯಾ ಆಡಳಿತ ಇದೆ. ಇಲ್ಲಿ ಕಾನೂನು, ಸುವ್ಯವಸ್ಥೆ ಮರು ಸ್ಥಾಪಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು’ ಎಂದು ವರದಿಯಲ್ಲಿ ಹೇಳಲಾಗಿದೆ.

‘ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳವನ್ನು ಕೂಡಲೇ ಕಳಿಸಿಲ್ಲ. ಒಂದು ವೇಳೆ ಅಗ್ನಿಶಾಮಕ ದಳವು ತಕ್ಷಣ ಗ್ರಾಮಕ್ಕೆ ತೆರಳಿ ಬೆಂಕಿ ನಂದಿಸುವ ಕೆಲಸ ಮಾಡಿದ್ದರೆ ಜನರ ಪ್ರಾಣ ಉಳಿಯುತ್ತಿತ್ತು.ಸರ್ಕಾರ ನೇತೃತ್ವದಲ್ಲಿ ನಡೆಯುತ್ತಿರುವ ವಸೂಲಿ, ಗೂಂಡಾ ತೆರಿಗೆ, ಭ್ರಷ್ಟಾಚಾರವು
ಈ ಹಿಂಸಾಚಾರಕ್ಕೆ ಕಾರಣವಾದ ಪ್ರಮುಖ ಅಂಶಗಳು. ಐಪಿಎಸ್‌ ಮತ್ತು ಐಎಎಸ್‌ ಅಧಿಕಾರಿಗಳಿಗೆ ಕಾನೂನನ್ನು ಪಾಲಿಸಲು ಕೇಂದ್ರ ಸರ್ಕಾರ ಸೂಚಿಸಬೇಕು’ ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ.

ಜೊತೆಗೆ, ತಮ್ಮ ಮೇಲೆ ದಾಳಿಗಳು ನಡೆದಿರುವುದಾಗಿಯೂಸಮಿತಿಯ ಸದಸ್ಯರು ಆರೋಪಿಸಿದ್ದಾರೆ. ದಾಳಿ ನಡೆವ ವೇಳೆ ಪಶ್ಚಿಮ ಬಂಗಾಳದ ಯಾವುದೇ ಪೊಲೀಸ್‌ ಅಧಿಕಾರಿ ಅಥವಾ ಪೊಲೀಸ್‌ ಪೇದೆ ತಮ್ಮ ರಕ್ಷಣೆಗೆ ಧಾವಿಸಿಲ್ಲ. ಆಡಳಿತಾರೂಢ ಟಿಎಂಸಿ ಜೊತೆ ಪೊಲೀಸ್‌ ಇಲಾಖೆ ಶಾಮೀಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಸಂಸದರು ಮತ್ತು ಮಾಜಿ ಐಪಿಎಸ್‌ ಅಧಿಕಾರಿಗಳನ್ನು ಈ ಸಮಿತಿ ಒಳಗೊಂಡಿತ್ತು. ಸತ್ಯಶೋಧನೆಗಾಗಿ ಬಿರ್‌ಭೂಮ್‌ಗೆ ಭೇಟಿ ನೀಡುವ ವೇಳೆ, ಈ ಸಮಿತಿಯ ಸದಸ್ಯರು ರಸ್ತೆಯ ಅಂಗಡಿಯೊಂದರಲ್ಲಿ ಸಿಹಿ ತಿನಿಸಿ ತಿಂದಿದ್ದರು. ಇದಕ್ಕೆ ಭಾರಿ ಆಕ್ಷೇಪ ವ್ಯಕ್ತವಾಗಿತ್ತು.

ಮೂವರ ಬಂಧನ: ಪಶ್ಚಿಮ ಬಂಗಾಳದ ಭಿರ್‌ಭೂಮ್‌ ಜಿಲ್ಲೆಯಲ್ಲಿ ನಡೆದಿದ್ದ ಟಿಎಂಸಿಯ ಸ್ಥಳೀಯ ನಾಯಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ಮೂವರನ್ನು ಬಂಧಿಸಲಾಗಿದೆ ಪೊಲೀಸರು ಬುಧವಾರ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT