ವಾಶಿಮ್: ‘ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯ ಸರ್ಕಾರಿ ಶಾಲೆಯ ಹಾಸ್ಟೆಲ್‌ವೊಂದರಲ್ಲಿ 299 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ’ ಎಂದು ಅಧಿಕಾರಿಗಳು ಗುರುವಾರ ತಿಳಿಸಿದರು.

‘ವಿದರ್ಭ ಪ್ರದೇಶದಲ್ಲಿರುವ ಭಾವನಾ ಪಬ್ಲಿಲ್ ಸ್ಕೂಲ್‌ನ ಹಾಸ್ಟೆಲ್‌ನಲ್ಲಿ ವಿವಿಧ ಜಿಲ್ಲೆಯ ಒಟ್ಟು 327 ವಿದ್ಯಾರ್ಥಿಗಳು ನೆಲೆಸಿದ್ದಾರೆ. ಈ ಹಾಸ್ಟೆಲ್‌ನ 229 ವಿದ್ಯಾರ್ಥಿಗಳು ಮತ್ತು ಶಾಲೆಯ ನಾಲ್ಕು ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಪ್ರದೇಶವನ್ನು ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದರು.

‘ಫೆಬ್ರುವರಿ 14 ರಂದು ವಿದ್ಯಾರ್ಥಿಗಳು ಹಾಸ್ಟೆಲ್‌ಗೆ ಮರಳಿದ್ದಾರೆ. ಪ್ರಾರಂಭದ ಕೆಲ ವಾರಗಳಲ್ಲಿ 21 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಯಿತು’ ಎಂದು ರಿಸೋದ್ ತಹಶೀಲ್ದಾರ್ ಅಜಿತ್ ಶೆಲಾರ್ ಅವರು ತಿಳಿಸಿದರು.

ಮಹಾರಾಷ್ಟ್ರದಲ್ಲಿ ಬುಧವಾರ 8,807 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಬುಧವಾರ 80 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಈವರೆಗೆ ಒಟ್ಟು 51,937 ಜನರು ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.