ಗುರುವಾರ , ನವೆಂಬರ್ 26, 2020
19 °C

ಬಿಹಾರ ಚುನಾವಣೆಯ ಬಿಜೆಪಿ ಉಸ್ತುವಾರಿ ದೇವೇಂದ್ರ ಫಡ್ನವಿಸ್‌ಗೆ ಕೋವಿಡ್-19 ದೃಢ

ಪಿಟಿಐ Updated:

ಅಕ್ಷರ ಗಾತ್ರ : | |

Devendra Fadnavis

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್‌ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪರೀಕ್ಷೆಯಲ್ಲಿ ಪತ್ತೆಯಾಗಿರುವುದಾಗಿ ಶನಿವಾರ ತಿಳಿಸಿದ್ದಾರೆ.

ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಲಾಕ್‌ಡೌನ್‌ನಿಂದ ನಾನು ಪ್ರತಿ ದಿನವೂ ಕೆಲಸ ಮಾಡುತ್ತಿದ್ದೇನೆ. ಆದರೆ ಈಗ ಸ್ವಲ್ಪ ಸಮಯದವರೆಗೆ ವಿರಾಮ ತೆಗೆದುಕೊಳ್ಳಬೇಕೆಂದು ದೇವರು ಬಯಸಿದ್ದಾನೆ ಎಂದು ತೋರುತ್ತಿದೆ! ನನಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ ಮತ್ತು ನಾನೀಗ ಐಸೋಲೇಷನ್‌ನಲ್ಲಿದ್ದೇನೆ. ವೈದ್ಯರ ಸಲಹೆಯ ಮೇರೆಗೆ ಎಲ್ಲ ರೀತಿಯ ಔಷಧ ಮತ್ತು ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತೇನೆ ಎಂದು ಬರೆದಿದ್ದಾರೆ.

ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೋವಿಡ್-19 ಪರೀಕ್ಷೆಗಳನ್ನು ಮಾಡಿಸಿಕೊಳ್ಳಲು ಸೂಚಿಸಲಾಗಿದೆ. ಎಲ್ಲರೂ ಸುರಕ್ಷತೆಯಿಂದಿರಿ! ಎಂದಿದ್ದಾರೆ.

ಸದ್ಯ ಬಿಹಾರ ಚುನಾವಣೆಯ ಉಸ್ತುವಾರಿ ವಹಿಸಿರುವ ದೇವೇಂದ್ರ ಫಡ್ನವಿಸ್‌ ಅವರು ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿದ್ದರು. ಮೂರು ಹಂತದಲ್ಲಿ ನಡೆಯಲಿರುವ ಬಿಹಾರ ಚುನಾವಣೆ ಅ. 28ರಿಂದ ಆರಂಭವಾಗಲಿದೆ. ಮೊದಲ ಹಂತದಲ್ಲಿ 78 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು