ಭಾನುವಾರ, ಏಪ್ರಿಲ್ 11, 2021
29 °C

ಮಹಾರಾಷ್ಟ್ರದಲ್ಲಿ ಏ. 23ರಿಂದ 10, 12ನೇ ತರಗತಿ ಪರೀಕ್ಷೆ

ಪಿಟಿಐ Updated:

ಅಕ್ಷರ ಗಾತ್ರ : | |

ಪುಣೆ: ಮಹಾರಾಷ್ಟ್ರ ಪ್ರೌಢ ಶಿಕ್ಷಣ ಮಂಡಳಿಯ 10 (ಎಸ್‌ಎಸ್‌ಸಿ) ಹಾಗೂ 12ನೇ ತರಗತಿ (ಎಚ್‌ಎಸ್‌ಸಿ) ಪರೀಕ್ಷೆಗಳು ಏ. 23ರಿಂದ ಮೇ 21ರ ವರೆಗೆ ನಡೆಯಲಿವೆ ಎಂದು ಮಂಡಳಿಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಎಸ್‌ಎಸ್‌ಸಿ ಪರೀಕ್ಷೆಗಳು ಏ. 29ರಿಂದ ಮೇ 20ರ ವರೆಗೆ, ಎಚ್‌ಎಸ್‌ಸಿ ಪರೀಕ್ಷೆಗಳು ಏ. 23ರಿಂದ ಮೇ 21ರ ವರೆಗೆ ನಡೆಯಲಿವೆ ಎಂದು ಮಂಡಳಿಯ ಕಾರ್ಯದರ್ಶಿ ಅಶೋಕ್‌ ಭೋಸ್ಲೆ ತಿಳಿಸಿದ್ದಾರೆ.

ಈ ಪರೀಕ್ಷೆಗಳನ್ನು ಪ್ರತಿ ವರ್ಷ ಫೆಬ್ರುವರಿ ಹಾಗೂ ಮಾರ್ಚ್‌ನಲ್ಲಿ ನಡೆಸಲಾಗುತ್ತಿತ್ತು. ಕೋವಿಡ್‌–19 ಹಿನ್ನೆಲೆಯಲ್ಲಿ ಈ ಬಾರಿ ಪರೀಕ್ಷೆಯ ದಿನಾಂಕಗಳನ್ನು ಬದಲಿಸಲಾಗಿದೆ ಎಂದೂ ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು