ಮಂಗಳವಾರ, ಮೇ 11, 2021
25 °C

ಮಹಾರಾಷ್ಟ್ರ: ಕಾಂಗ್ರೆಸ್‌ ಶಾಸಕ ರಾವ್‌ಸಾಹೇಬ್‌ ಅಂತಪುರ್ಕರ್‌ ನಿಧನ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಕೋವಿಡ್‌ ನಂತರದ ಸಮಸ್ಯೆಗಳಿಂದ ಬಳಲುತ್ತಿದ್ದ ಮಹಾರಾಷ್ಟ್ರದ ಕಾಂಗ್ರೆಸ್‌ ಶಾಸಕ ರಾವ್‌ಸಾಹೇಬ್‌ ಅಂತಪುರ್ಕರ್‌ ಅವರು (64) ಶುಕ್ರವಾರ ನಿಧನರಾದರು.

ನಾಂದೇಡ್ ಜಿಲ್ಲೆಯ ದೇಗ್ಲೂರ್‌ ವಿಧಾನಸಭೆ ಕ್ಷೇತ್ರದಿಂದ ಎರಡನೇ ಬಾರಿ ಆಯ್ಕೆಯಾಗಿದ್ದರು.

‘ರಾವ್‌ಸಾಹೇಬ್‌ ಅಂತಪುರ್ಕರ್‌ ಅವರು ಕೋವಿಡ್ ನಂತರ ಕಾಣಿಸಿಕೊಂಡಿದ್ದ ಆರೋಗ್ಯ ಸಂಬಂಧಿ ತೊಂದರೆಗಳಿಗಾಗಿ ಮುಂಬೈನ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ರಾತ್ರಿ ಸಾವನ್ನಪ್ಪಿದರು’ ಎಂದು ಮೂಲಗಳು ಶನಿವಾರ ತಿಳಿಸಿವೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರಿಗೆ ಏಪ್ರಿಲ್ 1ರಿಂದ ವೆಂಟಿಲೇಟರ್‌ ನೆರವು ನೀಡಲಾಗಿತ್ತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು