ಶನಿವಾರ, ಏಪ್ರಿಲ್ 1, 2023
28 °C

ಮಹಾರಾಷ್ಟ್ರ ವಿಧಾನ ಪರಿಷತ್‌ ಚುನಾವಣೆ: ಅಘಾಡಿಗೆ ಬಲ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮಹಾ ವಿಕಾಸ್ ಅಘಾಡಿ (ಎಂವಿಎ) ಅಭ್ಯರ್ಥಿ ಧಿರಾಜ್ ಲಿಂಗಡೆ ಅವರು ಬಿಜೆಪಿ ಅಭ್ಯರ್ಥಿ ರಂಜಿತ್‌ ಪಾಟೀಲ್‌ ಅವರನ್ನು ಪರಾಭವಗೊಳಿಸಿ ಮಹಾರಾಷ್ಟ್ರ ವಿಧಾನ ಪರಿಷತ್ತಿನ ಅಮರಾವತಿ ಪದವೀಧರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

ಲಿಂಗಡೆ ಅವರು 46,344 ಮತಗಳನ್ನು ಪಡೆದಿದ್ದರೆ, ರಂಜಿತ್‌ ಪಟೇಲ್‌ ಅವರು 42,962 ಮತಗಳನ್ನು ಪಡೆದುಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಧಾನಪರಿಷತ್ತಿನ ಐದು ಸ್ಥಾನಗಳಿಗೆ ಜ.30ರಂದು ಚುನಾವಣೆ ನಡೆದಿತ್ತು. ನಾಲ್ಕು ಕ್ಷೇತ್ರಗಳ ಫಲಿತಾಂಶ ಗುರುವಾರ ಪ್ರಕಟವಾಗಿತ್ತು. ಚುನಾವಣೆಯಲ್ಲಿ ಒಟ್ಟು ಮೂರು ಕ್ಷೇತ್ರಗಳಲ್ಲಿ ಶಿವಸೇನಾ (ಉದ್ಧವ್‌) ಕಾಂಗ್ರೆಸ್‌ ಮತ್ತು ಎನ್‌ಸಿಪಿ ನೇತೃತ್ವದ ಎಂವಿಎ ಜಯಭೇರಿ ಬಾರಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು