ಶುಕ್ರವಾರ, ಸೆಪ್ಟೆಂಬರ್ 30, 2022
26 °C

ರಸ್ತೆ ಅಪಘಾತದಲ್ಲಿ ಉದ್ಯಮಿ ಸೈರಸ್ ಮಿಸ್ತ್ರಿ ಸಾವು; ತನಿಖೆಗೆ ಆದೇಶ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ರಸ್ತೆ ಅಪಘಾತದಲ್ಲಿ ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ತನಿಖೆಗೆ ಆದೇಶಿಸಿದ್ದಾರೆ.

ಭಾನುವಾರ ಅಹಮದಾಬಾದ್‌ನಿಂದ ಮುಂಬೈಗೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಸಂಚುರಿಸುತ್ತಿದ್ದಾಗ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬಳಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಅಪಘಾತ ಸಂಭವಿಸಿತ್ತು.

ಇದನ್ನೂ ಓದಿ: 

ಸೈರಸ್ ಮಿಸ್ತ್ರಿ ನಿಧನಕ್ಕೆ ಸಂತಾಪ ಸೂಚಿಸಿರುವ ದೇವೇಂದ್ರ ಫಡಣವೀಸ್, ಡಿಜಿಪಿ ಜೊತೆ ಮಾತನಾಡಿ ವಿವರವಾದ ತನಿಖೆಗೆ ಆದೇಶಿಸಿದ್ದಾರೆ.

ಪಾಲ್ಘರ್ ಜಿಲ್ಲೆಯಲ್ಲಿ ಸೂರ್ಯ ನದಿಯ ಸೇತುವೆ ಮೇಲೆ 3.15ರ ಸುಮಾರಿಗೆ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು