ಅಡುಗೆ ಅನಿಲ ಸಿಲಿಂಡರ್ ಸ್ಪೋಟ; 8 ಮಂದಿಗೆ ಗಂಭೀರ ಗಾಯ

ನಾಸಿಕ್: ಇಲ್ಲಿನ ವಡಾಲ ನಾಕ ಪ್ರದೇಶದ ಕಟ್ಟಡವೊಂದರಲ್ಲಿ ಶುಕ್ರವಾರ ರಾತ್ರಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೌಸಿಂಗ್ ಸೊಸೈಟಿ ಕಟ್ಟಡದಲ್ಲಿ ಅನಿಲ ಸೋರಿಕೆಯಾಗುತ್ತಿದ್ದ ಸಿಲಿಂಡರ್ ಬದಲಾಯಿಸುತ್ತಿರುವಾಗ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದರು.‘ಗಾಯಾಳುಗಳನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ‘ ಎಂದು ಅವರು ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.