ಬುಧವಾರ, ಸೆಪ್ಟೆಂಬರ್ 22, 2021
27 °C

ಮಹಾರಾಷ್ಟ್ರ:ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು; ಐವರು ಮಹಿಳೆಯರ ರಕ್ಷಣೆ

ಪಿಟಿಐ Updated:

ಅಕ್ಷರ ಗಾತ್ರ : | |

ಠಾಣೆ: ಮಹಾರಾಷ್ಟ್ರದ ಠಾಣೆಯಲ್ಲಿ ವೇಶ್ಯಾವಾಟಿಕೆ ಜಾಲವೊಂದನ್ನು ಪೊಲೀಸರು ಭೇದಿಸಿದ್ದು,  ಒಬ್ಬರನ್ನು ಬಂಧಿಸಿದ್ದಾರೆ.

‘ನಿಖರ ಮಾಹಿತಿ ಮೇರೆಗೆ ಉಲ್ಲಾಸನಗರ ಅಪರಾಧ ವಿಭಾಗದ ಮಾನವ ಕಳ್ಳಸಾಗಣೆ ವಿರೋಧಿ ಘಟಕವು  ವಿಠಲವಾಡಿ ಪ್ರದೇಶದ ಅಶೋಲೆ ಗ್ರಾಮದಲ್ಲಿರುವ ವಸತಿಗೃಹವೊಂದರ ಮೇಲೆ ದಾಳಿ ನಡೆಸಿದೆ. ಈ ಸಂಬಂಧ ಲಾಡ್ಜ್‌ ಮಾಲೀಕನನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ವಕ್ತಾರೆ ಜಯಮಾಲಾ ವಾಸವೇ ತಿಳಿಸಿದ್ದಾರೆ.

‘ಐವರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಅವರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಲಾಡ್ಜ್‌ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಅವರು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು