ಶನಿವಾರ, ಡಿಸೆಂಬರ್ 4, 2021
20 °C

ವೈದ್ಯಕೀಯ ಕೋರ್ಸ್ ಪ್ರವೇಶ‌: ಹಳೇ ಸೂತ್ರ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಿಗದಿಪಡಿಸಲಾಗಿದ್ದ 70:30ರ ಅನುಪಾತದ ಸೀಟು ಹಂಚಿಕೆಯ ಸೂತ್ರವನ್ನು ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿದೆ.

ಹಿಂದೆ ಇದ್ದ ಈ ಸೂತ್ರದ ಪ್ರಕಾರ ವೈದ್ಯಕೀಯ ಕಾಲೇಜುಗಳಲ್ಲಿ ಶೇ 70ರಷ್ಟು ಸೀಟುಗಳು ಸ್ಥಳೀಯರಿಗೆ (ರಾಜ್ಯದಲ್ಲಿರುವವರಿಗೆ),  ಉಳಿದ ಶೇ 30ರಷ್ಟನ್ನು ಹೊರ ರಾಜ್ಯದವರಿಗೆ ಮೀಸಲಿಡಲಾಗಿತ್ತು. 

‘ವೈದ್ಯಕೀಯ ಕೋರ್ಸ್‌ಗಳಿಗೆ ನಿಗದಿಪಡಿಸಲಾಗಿದ್ದ 70: 30 ಸೀಟು ಹಂಚಿಕೆ ಸೂತ್ರವನ್ನು ರದ್ದುಗೊಳಿಸಿದ್ದು, ಇದಕ್ಕೆ ಬದಲಾಗಿ ಒಂದು ಸೀಟು ಸ್ಥಳೀಯರಿಗೆ, ಮತ್ತೊಂದು ಸೀಟು ಮೆರಿಟ್‌ ಹೊಂದಿದ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಅಮಿತ್ ದೇಶಮುಖ್ ಅವರು ಮಂಗಳವಾರ ವಿಧಾನಸಭೆಗೆ ತಿಳಿಸಿದರು.

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ವಿವಾದಾತ್ಮಕ 70:30 ಸೂತ್ರವನ್ನು ರದ್ದುಗೊಳಿಸುವಂತೆ ರಾಜ್ಯದ ವಿದ್ಯಾರ್ಥಿಗಳು ಮತ್ತು ಪೋಷಕರು ಬಹಳ ಹಿಂದಿನಿಂದಲೂ ಒತ್ತಾಯಿಸುತ್ತಿದ್ದರು.

ಇತರ ಪ್ರದೇಶಗಳಿಗೆ ಹೋಲಿಸಿದರೆ ರಾಜ್ಯದ ಮರಾಠವಾಡ ಮತ್ತು ವಿದರ್ಭ ಪ್ರದೇಶಗಳಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ ಕಡಿಮೆ. ಹೀಗಾಗಿ, ಈ ಪ್ರದೇಶದ ವಿದ್ಯಾರ್ಥಿಗಳು, ವೈದ್ಯಕೀಯ ಕಾಲೇಜುಗಳಿಗೆ ಸೇರುವ ಸಂದರ್ಭದಲ್ಲಿ ತೀವ್ರ ತೊಂದರೆ ಅನುಭವಿಸುತ್ತಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು