ಬುಧವಾರ, ನವೆಂಬರ್ 25, 2020
25 °C
ಗೃಹಸಚಿವ ಅನಿಲ್ ದೇಶ್‌ಮುಖ್ ಜತೆ ದೂರವಾಣಿ ಮಾತುಕತೆ

ಅರ್ನಬ್‌ ಆರೋಗ್ಯ, ಭದ್ರತೆ ವಿಚಾರಿಸಿದ ಮಹಾರಾಷ್ಟ್ರ ರಾಜ್ಯಪಾಲ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿ.ವಿ. ಸಂಪಾದಕ ಅರ್ನಬ್ ಗೋಸ್ವಾಮಿ ಅವರ ಭದ್ರತೆ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್ ಕೋಶಯಾರಿ ಅವರು ಗೃಹಸಚಿವ ಅನಿಲ್ ದೇಶ್‌ಮುಖ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.

ಅರ್ನಬ್ ಅವರನ್ನು ಭೇಟಿ ಮಾಡಿ ಮಾತನಾಡಲು ಅವರ ಕುಟುಂಬಕ್ಕೆ ಅವಕಾಶ ನೀಡಬೇಕೆಂದು ರಾಜ್ಯಪಾಲರು ಗೃಹಸಚಿವರಿಗೆ ಸೂಚಿಸಿದ್ದಾರೆ ಎಂದು ರಾಜ್ಯಪಾಲರ ಕಚೇರಿಯ ಪ್ರಕಟಣೆ ಸೋಮವಾರ ತಿಳಿಸಿದೆ.

ಅರ್ನಬ್ ಬಂಧನದ ರೀತಿಯ ಕುರಿತು ರಾಜ್ಯಪಾಲರು, ಗೃಹಸಚಿವರಲ್ಲಿ ತಮ್ಮ ಕಳವಳ ವ್ಯಕ್ತಪಡಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು