ಶನಿವಾರ, ಸೆಪ್ಟೆಂಬರ್ 25, 2021
21 °C

ರಾಯಗಡದಲ್ಲಿ ಭಾರಿ ಮಳೆ: ಎನ್‌ಡಿಆರ್‌ಎಫ್‌ ತಂಡಗಳ ನಿಯೋಜನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಲಿಬಾಗ್ಪಿ: ಮಹಾರಾಷ್ಟ್ರದ ಕರಾವಳಿ ಪ್ರದೇಶದಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆಯಾಗುತ್ತಿದ್ದು, ರಾಯಗಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ತುರ್ತು ನೆರವಿಗೆ ಎನ್‌ಡಿಆರ್‌ಎಫ್‌ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಸರಾಸರಿ ವಾರ್ಷಿಕ ಮಳೆಯ ಶೇ 98.89 ರಷ್ಟು ಮಳೆ ಈಗಾಗಲೇ ಸುರಿದಿದೆ. ಮುರುದ್‌ನಲ್ಲಿ ಕಳೆದ 24 ಗಂಟೆಗಳಲ್ಲಿ 124 ಮಿ.ಮೀ, ಶ್ರೀವರ್ಧನದಲ್ಲಿ 122 ಮಿ.ಮೀ ಹಾಗೂ ಪನ್ವೇಲ್‌ನಲ್ಲಿ 72.60 ಮಿ.ಮೀ ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುರುದ್‌ ತಾಲ್ಲೂಕಿನ ಸಲವ್‌ನಲ್ಲಿ ಭೂಕುಸಿತ ಸಂಭವಿಸಿದೆ. ಅಲಿಬಾಗ್-ಮುರುದ್ ಮತ್ತು ರೋಹಾ-ಮುರುದ್ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು