ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ನಿರ್ಬಂಧ ಉಲ್ಲಂಘಿಸಿದರೆ ಕಠಿಣ ಕ್ರಮ

Last Updated 18 ಏಪ್ರಿಲ್ 2021, 9:00 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದಲ್ಲಿ ತೀವ್ರಗತಿಯಲ್ಲಿ ಏರುತ್ತಿರುವ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿರುವ ಸರ್ಕಾರ, ನಿರ್ಬಂಧಗಳನ್ನು ಉಲ್ಲಂಘಿಸುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

‘ಮೇ 1ರವರೆಗೂ ಕರ್ಫ್ಯೂ, ನಿಷೇಧಾಜ್ಞೆಯಂತಹ ಕಠಿಣ ನಿಯಮಗಳು ಜಾರಿಯಲ್ಲಿರಲಿವೆ. ಇದನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ರಾಜ್ಯದ ಗೃಹ ಸಚಿವ ದಿಲೀಪ್‌ ವಾಲ್ಸೆ ಪಾಟೀಲ್‌ ತಿಳಿಸಿದ್ದಾರೆ.

ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಮತ್ತು ರಾಜಕೀಯ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಮದುವೆಗೆ 25 ಮಂದಿ ಮತ್ತು ಅಂತ್ಯ ಸಂಸ್ಕಾರದಲ್ಲಿ 20 ಮಂದಿಯಷ್ಟೇ ಪಾಲ್ಗೊಳ್ಳುವುದಕ್ಕೆ ಅವಕಾಶ ನೀಡಲಾಗಿದೆ.

ಶನಿವಾರ ರಾಜ್ಯದಲ್ಲಿ ಇದುವರೆಗಿನ ಗರಿಷ್ಠ ಅಂದರೆ 67,123 ಹೊಸ ಪ್ರಕರಣಗಳು ದಾಖಲಾಗಿದ್ದವು ಹಾಗೂ 419 ಮಂದಿ ಮೃತಪಟ್ಟಿದ್ದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT