ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿಯ ಶೇ 27 ಸ್ಥಾನ ಸಾಮಾನ್ಯ ವರ್ಗಕ್ಕೆ

Last Updated 15 ಡಿಸೆಂಬರ್ 2021, 15:16 IST
ಅಕ್ಷರ ಗಾತ್ರ

ನವದೆಹಲಿ: ಸ್ಥಳೀಯ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಿಟ್ಟಿದ್ದ ಶೇ 27ರಷ್ಟು ಸ್ಥಾನಗಳನ್ನು ಸಾಮಾನ್ಯ ವರ್ಗವೆಂದು ಪರಿಗಣಿಸಿ ಚುನಾವಣಾ ಪ್ರಕ್ರಿಯೆಯನ್ನು ಮುಂದುವರಿಸುವಂತೆ ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗಕ್ಕೆ (ಎಸ್‌ಇಸಿ) ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.

ಒಬಿಸಿಗಳಿಗೆ ಮೀಸಲಾದ ಸ್ಥಾನಗಳ ಕುರಿತು ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿನ ಆದೇಶದವರೆಗೆ ಸುಪ್ರೀಂ ಕೋರ್ಟ್ ಡಿ. 6ರಂದು ತಡೆಹಿಡಿದಿತ್ತು ಮತ್ತು ಇತರ ಸ್ಥಾನಗಳಿಗೆ ಚುನಾವಣಾ ಪ್ರಕ್ರಿಯೆಯು ಮುಂದುವರಿಯಲಿದೆ ಎಂದೂ ಸ್ಪಷ್ಟಪಡಿಸಿತ್ತು.

ಕಳೆದ ವಾರದ ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿ ಮಹಾರಾಷ್ಟ್ರ ಸರ್ಕಾರವು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ಸಿ.ಟಿ. ರವಿಕುಮಾರ್ ಅವರನ್ನೊಳಗೊಂಡ ನ್ಯಾಯಪೀಠವು, ವಾರದೊಳಗೆ ಶೇ 27ರಷ್ಟು ಸೀಟುಗಳಿಗೆ ಹೊಸದಾಗಿ ಅಧಿಸೂಚನೆ ಹೊರಡಿಸುವಂತೆ ಎಸ್‌ಇಸಿಗೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT