ಭಾನುವಾರ, ಅಕ್ಟೋಬರ್ 24, 2021
25 °C

ಕಿರೀಟ್ ವಿರುದ್ಧ ₹100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಅನಿಲ್ ಪರಬ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರು ತಮ್ಮ ವಿರುದ್ಧ ದುರುದ್ದೇಶಪೂರಿತ ಮಾನಹಾನಿಕಾರಕ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಮಹಾರಾಷ್ಟ್ರದ ಸಚಿವ ಅನಿಲ್ ಪರಬ್ ಅವರು, ಮಂಗಳವಾರ ಬಾಂಬೆ ಹೈಕೋರ್ಟ್‌ನಲ್ಲಿ ಕಿರೀಟ್ ಅವರ ವಿರುದ್ಧ ₹100 ಕೋಟಿ ಮೊತ್ತದ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. 

ಶಿವಸೇನಾದ ಮುಖಂಡರೂ ಆಗಿರುವ ಅನಿಲ್ ಅವರು, ಕಿರೀಟ್ ಬೇಷರತ್ ಕ್ಷಮೆಯಾಚಿಸುವಂತೆ ನಿರ್ದೇಶನ ನೀಡಬೇಕೆಂದೂ ನ್ಯಾಯಾಲಯಕ್ಕೆ ಕೋರಿದ್ದಾರೆ.

ಅಗ್ಗದ ಪ್ರಚಾರ ಬಯಸುತ್ತಿರುವ ಕಿರೀಟ್ ಅವರ ಹೇಳಿಕೆಯಿಂದಾಗಿ ತಮ್ಮ ವರ್ಚಸ್ಸಿಗೆ ಧಕ್ಕೆ ಬಂದಿದೆ. ಭವಿಷ್ಯದಲ್ಲಿ ಅವರು ತಮ್ಮ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಅಥವಾ ಪ್ರಕಟಿಸದಂತೆಯೂ ಅನಿಲ್,  ನ್ಯಾಯಾಲಯದ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

‘ರತ್ನಗಿರಿ ಜಿಲ್ಲೆಯ ದಾಪೋಲಿಯಲ್ಲಿನ ರೆಸಾರ್ಟ್‌ ನಿರ್ಮಾಣಕ್ಕೆ ಸಂಬಂಧಿಸಿದ ಹಗರಣವೊಂದರಲ್ಲಿ ನನ್ನ ವಿರುದ್ಧ ಕಿರೀಟ್ ಆರೋಪ ಮಾಡಿದ್ದಾರೆ. ಅಲ್ಲದೇ, ಈ ಕುರಿತು 2021ರ ಮೇ ತಿಂಗಳಿನಿಂದ ನನ್ನ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ನಿರಂತರ ಆರೋಪಗಳ ಅಭಿಯಾನವನ್ನೂ ಮಾಡಿದ್ದಾರೆ’ ಎಂದು ಅನಿಲ್ ಪರಬ್ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.