ಮಂಗಳವಾರ, ಡಿಸೆಂಬರ್ 1, 2020
21 °C

ಮಹಾರಾಷ್ಟ್ರ: ಕಲಾ ವಿಭಾಗದಲ್ಲಿ ಸಚಿವ ಏಕನಾಥ್‌ ಶಿಂಧೆಗೆ ಶೇ 77.25 ಅಂಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮಹಾರಾಷ್ಟ್ರ ನಗರಾಭಿವೃದ್ಧಿ ಸಚಿವರಾಗಿರುವ ಏಕನಾಥ್‌ ಶಿಂಧೆ ಅವರು ಕಲಾ ವಿಭಾಗದಲ್ಲಿ ಶೇ 77.25 ಅಂಕ ಪಡೆದು ಪದವಿಯನ್ನು ಪಡೆದಿದ್ದಾರೆ ಎಂದು ಅವರ ಪುತ್ರ, ಲೋಕಸಭಾ ಸಂಸದ ಶ್ರೀಕಾಂತ್‌ ಅವರು ಮಂಗಳವಾರ ಘೋಷಿಸಿದ್ದಾರೆ.

‘ಯುವಕರಾಗಿದ್ದ ಸಂದರ್ಭದಲ್ಲಿ ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ಅಧ್ಯಯನವನ್ನು ಅರ್ಧದಲ್ಲೇ ಮೊಟಕುಗೊಳಿಸಿದ್ದ ತಂದೆಯವರು, ಇದೀಗ ಯಶವಂತರಾವ್‌ ಚೌವಾಣ್‌ ಮಹಾರಾಷ್ಟ್ರ ಮುಕ್ತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ. ಜೀವನದಲ್ಲಿ ಕಠಿಣ ಪರಿಶ್ರಮದಿಂದ ಕಾರ್ಯನಿರ್ವಹಿಸಿದರೆ ಯಾರು ಯಾವಾಗ ಬೇಕಿದ್ದರೂ ಯಶಸ್ಸು ಸಾಧಿಸಬಹುದು ಎನ್ನುವುದಕ್ಕೆ ನನ್ನ ತಂದೆಯ ಫಲಿತಾಂಶವೇ ಸಾಕ್ಷಿ’ ಎಂದು ಶ್ರೀಕಾಂತ್‌ ಅವರು ಟ್ವೀಟ್‌ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು