ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಪುಣೆಯಲ್ಲಿ ಹೊಸ ನಿಯಂತ್ರಣ ಕ್ರಮ, ನಾಳೆಯಿಂದ ಜಾರಿ

Last Updated 21 ಫೆಬ್ರುವರಿ 2021, 10:10 IST
ಅಕ್ಷರ ಗಾತ್ರ

ಪುಣೆ: ಮಹಾರಾಷ್ಟ್ರದಲ್ಲಿ ಪ್ರಕರಣಗಳು ಹೆಚ್ಚುತ್ತಿದ್ದಂತೆ ಪುಣೆ ಜಿಲ್ಲಾಡಳಿತವು ಕೋವಿಡ್‌ ನಿಯಂತ್ರಿಸುವ ನಿಟ್ಟಿನಲ್ಲಿ ರಾತ್ರಿ 11 ರಿಂದ ಬೆಳಿಗ್ಗೆ ಆರು ಗಂಟೆಯ ವರೆಗೆ ರಾತ್ರಿ ಕರ್ಫ್ಯೂವನ್ನು ಘೋಷಿಸಿದೆ. ಈ ಸಮಯದಲ್ಲಿ ಅಗತ್ಯ ಸೇವೆಗಳಲ್ಲಿ ತೊಡಗಿರುವವರಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಿ ಕೊಡಲಾಗಿದೆ.

‘ಸೋಮವಾರದಿಂದ ರಾತ್ರಿ ಕರ್ಪ್ಯೂ ಜಾರಿಗೆ ಬರಲಿದ್ದು, ಈ ವೇಳೆ ಹಾಲು, ದಿನ ಪತ್ರಿಕೆ, ತರಕಾರಿ ವಿತರಣೆ ಮತ್ತು ಆಸ್ಪತ್ರೆ ಸೇವೆಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.

‘ಪುಣೆಯಲ್ಲಿ ಫೆಬ್ರುವರಿ 28ರ ತನಕ ಶಾಲೆ ಮತ್ತು ಕಾಲೇಜು ಅನ್ನು ಮುಚ್ಚುವಂತೆ ಸೂಚಿಸಲಾಗಿದೆ. ಅಲ್ಲದೆ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಪ‍್ರತಿನಿತ್ಯ ರಾತ್ರಿ 11 ಗಂಟೆಯ ಬಳಿಕ ಮುಚ್ಚುವಂತೆ ಸೂಚನೆ ನೀಡಲಾಗಿದೆ’ ಎಂದು ವಿಭಾಗೀಯ ಆಯುಕ್ತ ಸೌರಭ್ ರಾವ್ ಅವರು ಹೇಳಿದರು.

‘ಸೋಂಕು ಪ್ರಸರಣವನ್ನು ನಿಯಂತ್ರಿಸಲು ಸಣ್ಣ ಕಂಟೈನ್‌ಮೆಂಟ್‌ ವಲಯಗಳನ್ನು ವಿಂಗಡಿಸಲಾಗಿದೆ. ಸೋಂಕು ಪತ್ತೆ ಪ್ರಮಾಣ ಮತ್ತು ಪರೀಕ್ಷೆಯನ್ನು ಹೆಚ್ಚಿಸಲಾಗಿದೆ. ಮದುವೆ ಸೇರಿದಂತೆ ಇತರೆ ಸಾಮಾಜಿಕ ಕಾರ್ಯಕ್ರಮಗಳಿಗಾಗಿ ಹೊಸ ನಿಯಮಗಳನ್ನು ಬಿಡುಗಡೆಗೊಳಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರೊಂದಿಗೆ ಭಾನುವಾರ ಸಭೆ ನಡೆಸಿದ ಬಳಿಕ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಶನಿವಾರ ಪುಣೆಯಲ್ಲಿ 998 ಹೊಸ ಪ್ರಕರಣಗಳು ವರದಿಯಾಗಿವೆ. ಹೊಸದಾಗಿ 9 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಪುಣೆಯಲ್ಲಿ ಈವರೆಗೆ 5,14,319 ಪ್ರಕರಣಗಳು ವರದಿಯಾಗಿವೆ. 11,698 ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT