ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಮಹಿಳಾ ಪೊಲೀಸರ ಕೆಲಸದ ಅವಧಿ ಕಡಿತ

Last Updated 24 ಸೆಪ್ಟೆಂಬರ್ 2021, 22:16 IST
ಅಕ್ಷರ ಗಾತ್ರ

ಮುಂಬೈ: ಮಹಿಳಾ ಪೊಲೀಸರು ತಮ್ಮ ವೃತ್ತಿ ಹಾಗೂ ವೈಯಕ್ತಿಕ ಜೀವನವನ್ನು ಸರಿದೂಗಿಸಲು ಅನುವಾಗುವಂತೆ ಅವರ ಕೆಲಸದ ಅವಧಿಯನ್ನು12 ಗಂಟೆಯಿಂದ 8 ಗಂಟೆಗೆ ಕಡಿತಗೊಳಿಸಲಾಗಿದೆ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಸಂಜಯ್‌ ಪಾಂಡೆ ತಿಳಿಸಿದ್ದಾರೆ.

ಕಳೆದ ತಿಂಗಳು ನಾಗ್ಪುರ, ಅಮರಾವತಿ ಮತ್ತು ಪುಣೆ ಗ್ರಾಮಾಂತರದಲ್ಲಿ ಮೊದಲಿಗೆ ಪ್ರಾಯೋಗಿಕವಾಗಿ ಇದನ್ನು ಆರಂಭಿಸಲಾಗಿದೆ. ಇನ್ನು ಕೆಲವು ದಿನಗಳಲ್ಲಿ ರಾಜ್ಯದ ಇತರ ನಗರಗಳು ಮತ್ತು ಜಿಲ್ಲೆಗಳಲ್ಲಿ ಇದು ಜಾರಿಗೆ ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೃತ್ತಿಪರ ಕರ್ತವ್ಯಗಳಲ್ಲದೆ ಮಹಿಳಾ ಪೊಲೀಸರು ಮನೆಯಲ್ಲಿ ತಮ್ಮದೇ ಆದ ಕೆಲಸಗಳನ್ನು ಮಾಡಬೇಕಾಗುತ್ತದೆ. ಅದಕ್ಕಾಗಿಯೇ ಒಂದು ತಿಂಗಳ ಹಿಂದೆ ಇದನ್ನು ಆರಂಭಿಸಲಾಯಿತು. ಇದರಿಂದ ಉತ್ತಮ ಫಲಿತಾಂಶವೂ ಬಂದಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT