ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಸೇನಾ ಬಿಕ್ಕಟ್ಟು: ಸಾಂವಿಧಾನಿಕ ಪೀಠಕ್ಕೆ ವರ್ಗ

Last Updated 23 ಆಗಸ್ಟ್ 2022, 11:38 IST
ಅಕ್ಷರ ಗಾತ್ರ

ನವದೆಹಲಿ: ಶಾಸಕರ ಪಕ್ಷಾಂತರ, ಪಕ್ಷ ವಿಲೀನ ಮತ್ತು ಶಾಸಕರ ಅನರ್ಹತೆಗೆ ಸಂಬಂಧಿಸಿ ಹಲವು ಸಾಂವಿಧಾನಿಕ ಪ್ರಶ್ನೆಗಳನ್ನು ಎತ್ತಿರುವಶಿವಸೇನಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಮಂಗಳವಾರ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದಲ್ಲಿನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಇದ್ದ ತ್ರಿಸದಸ್ಯ ಪೀಠವು, ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಈ ಅರ್ಜಿಗಳನ್ನು ಇದೇ 25ರಂದು ವಿಚಾರಣೆ ನಡೆಸಲಿದ್ದು, ಅದುವರೆಗೆ ಶಿಂಧೆ ಬಣದ ಅರ್ಜಿಗೆ ಸಂಬಂಧಿಸಿ ಯಾವುದೇ ಆದೇಶ ನೀಡದಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಏಕನಾಥ್‌ ಶಿಂಧೆ ಅವರು ತಮ್ಮದೇ ನಿಜವಾದಶಿವಸೇನಾ ಎಂದು ಹಕ್ಕು ಪ್ರತಿಪಾದಿಸುತ್ತಿದ್ದು, ಪಕ್ಷದ ಚಿಹ್ನೆ ಬಿಲ್ಲು ಮತ್ತು ಬಾಣದ ಸಂಕೇತವನ್ನು ತಮಗೇ ನೀಡಬೇಕೆಂದು ಕೋರಿದ್ದಾರೆ. ಉದ್ಧವ್‌ ಠಾಕ್ರೆ ಬಣದ ಪರ ಹಿರಿಯ ವಕೀಲ ಕಪಿಲ್‌ ಸಿಬಲ್‌ ವಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT