ಪಾಲ್ಘರ್ (ಪಿಟಿಐ): ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಶಾಲೆಯೊಂದರ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 41 ವರ್ಷದ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಕಳೆದ ತಿಂಗಳು ಈ ಘಟನೆ ನಡೆದಿದ್ದು, ಬಾಲಕಿ ಇತ್ತೀಚೆಗೆ ಪಾಲಕರಿಗೆ ಮಾಹಿತಿ ನೀಡಿದ್ದಳು. ಪಾಲಕರು ತಕ್ಷಣ ದೂರು ದಾಖಲಿಸಿದ್ದಾರೆ. ಪೋಕ್ಸೋ ಕಾಯ್ದೆ ಅಡಿ ಶಿಕ್ಷಕನನ್ನು ಗುರುವಾರ ಸಂಜೆ ಬಂಧಿಸಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.