ಮಂಗಳವಾರ, ಜನವರಿ 26, 2021
24 °C

ಔರಂಗಾಬಾದ್ ಹೆಸರು ಬದಲಿಸುವ ವಿವಾದ: ರೈಲ್ವೆ ನಿಲ್ದಾಣದಲ್ಲಿ ಬಿಗಿ ಭದ್ರತೆ

ಪಿಟಿಐ Updated:

ಅಕ್ಷರ ಗಾತ್ರ : | |

ಔರಂಗಾಬಾದ್: ಔರಂಗಾಬಾದ್‌ ನಗರದ ಹೆಸರು ಬದಲಿಸುವ ಕುರಿತ ವಿವಾದದ ಕುರಿತಂತೆ ಅಹಿತಕರ ಘಟನೆ ತಡೆಯಲು ಮುಂಜಾಗ್ರತೆಯಾಗಿ ರೈಲ್ವೆ ಪೊಲೀಸರು ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಭದ್ರತೆಯನ್ನು ಇನ್ನಷ್ಟು ಬಲಪಡಿಸಿದ್ದಾರೆ.

ಔರಂಗಾಬಾದ್ ನಗರದ ಹೆಸರನ್ನು ಸಂಭಾಜಿನಗರ ಎಂದು ಬದಲಿಸಬೇಕು ಎಂಬ ಚರ್ಚೆ ಕಳೆದ ಕೆಲವು ದಿನಗಳಿಂದ ಮುನ್ನೆಲೆಗೆ ಬಂದಿದ್ದು, ಪರ ವಿರೋಧದ ಮಾತುಗಳು ಕೇಳಿಬರುತ್ತಿವೆ.

ಮುಂಜಾಗ್ರತೆಯಾಗಿ ರೈಲ್ವೆ ಪೊಲೀಸ್ ಪಡೆ (ಆರ್‌ಪಿಎಫ್‌) ಮತ್ತು ಸರ್ಕಾರಿ ರೈಲ್ವೆ ಪೊಲೀಸರನ್ನು (ಜಿಆರ್‌ಪಿ)  ನಿಯೋಜಿಸಿದ್ದು, ಗಸ್ತು ಹೆಚ್ಚಿಸಲಾಗಿದೆ ಎಂದು ಅರ್‌ಪಿಎಫ್‌ ಇನ್‌ಸ್ಪೆಕ್ಟರ್ ಅರವಿಂದ ಕುಮಾರ್ ಶರ್ಮಾ ತಿಳಿಸಿದ್ದಾರೆ.

ಅಧಿಕೃತ ಟಿಕೆಟ್‌ ಉಳ್ಳ ಜನರಿಗಷ್ಟೇ ಫ್ಲಾಟ್‌ಫಾರ್ಮ್‌ನಲ್ಲಿ ಕಾಯಲು ಅವಕಾಶ ನೀಡಲಾಗುತ್ತಿದೆ ಎಂದು ಭದ್ರತಾ ಹೊಣೆ ಉಸ್ತುವಾರಿ ಹೊತ್ತ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು