ಗುರುವಾರ , ಆಗಸ್ಟ್ 11, 2022
26 °C

ನಾಯಿ ಕಡಿತ: 100ಕ್ಕೂ ಹೆಚ್ಚು ಪ್ರಕರಣಗಳು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಾಲ್ಗರ್‌: ಮಹಾರಾಷ್ಟ್ರದ ಪಾಲ್ಗರ್‌ ಜಲ್ಲೆಯ ಮನೋರ್ ನಗರದಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದ್ದು,  ನವೆಂಬರ್‌ನಿಂದ ಇಲ್ಲಿಯವರೆಗೂ 100ಕ್ಕೂ ಹೆಚ್ಚು ಜನರಿಗೆ ಕಚ್ಚಿವೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದರು.

ಈ ಪ್ರದೇಶದಲ್ಲಿ ಬೀದಿ ನಾಯಿಗಳ ಕಡಿತದ ಪ್ರಕರಣಗಳಲ್ಲಿ ದಿನೇ ದಿನೇ ಏರಿಕೆ ಆಗುತ್ತಿದೆ ಎಂದು ಮನೋರ್ ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್‌ಸಿ) ವೈದ್ಯಕೀಯ ಅಧಿಕಾರಿ ಡಾ.ಸ್ವಪ್ನಿಲ್ ಕುಂಬದ್ವಾಡ್ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಕಳೆದ ತಿಂಗಳು 58 ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ. ಡಿಸೆಂಬರ್‌ 1ರಿಂದ 10ವರೆಗೆ ನಾಯಿ ಕಡಿತದ 37 ಪ್ರಕರಣಗಳು ಬೆಳಕಿಗೆ ಬಂದಿವೆ.

‘ಸೋಮವಾರವೂ ಪಿಎಚ್‌ಸಿಯಲ್ಲಿ ಎರಡು ಹೊಸ ಪ್ರಕರಣಗಳು ವರದಿಯಾಗಿದ್ದು, 5 ರಿಂದ 7 ವರ್ಷದ ಮಕ್ಕಳು ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಅವರ ಪರಿಸ್ಥಿತಿ ಬಹಳ ಗಂಭೀರವಾಗಿದ್ದರಿಂದ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು’ ಎಂದು ಡಾ.ಸ್ವಪ್ನಿಲ್ ಅವರು ತಿಳಿಸಿದರು.

ಹೆಚ್ಚಾಗಿ ಮಕ್ಕಳು ನಾಯಿ ಕಡಿತಕ್ಕೆ ಒಳಗಾಗುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದರು. ಗಂಭೀರತೆಯನ್ನು ಅರಿತು, ಸ್ಥಳೀಯ ಆಡಳಿತ ತುರ್ತಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಇಲ್ಲಿನ ಜನರು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು