ಮಹಾರಾಷ್ಟ್ರ: ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಠಾಣೆ: ‘ಮಹಾರಾಷ್ಟ್ರದ ಉಲ್ಲಾಸ್ ನಗರದ ರೈಲ್ವೆ ನಿಲ್ದಾಣದಲ್ಲಿ 14 ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ’ ಎಂದು ಪೊಲೀಸರು ಭಾನುವಾರ ತಿಳಿಸಿದರು.
‘ಈ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, 35 ವರ್ಷದ ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ. ಬಾಲಕಿಯು ತನ್ನ ಸ್ನೇಹಿತರೊಂದಿಗೆ ಶಿರಡಿಯಿಂದ ಹಿಂತಿರುಗುತ್ತಿದ್ದಾಗ ಆರೋಪಿಯು ಅಪ್ರಾಪ್ತೆಯನ್ನು ಉಲ್ಲಾಸನಗರ ರೈಲ್ವೆ ನಿಲ್ದಾಣದ ಪ್ರತ್ಯೇಕ ಕೊಠಡಿಗೆ ಕರೆದೊಯ್ಯುದ್ದು, ಅಲ್ಲಿ ಅತ್ಯಾಚಾರವೆಸಗಿದ್ದಾನೆ’ ಎಂದು ಕಲ್ಯಾಣ್ ರೈಲ್ವೆ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದರು.
‘ಈ ಸಂಬಂಧ ಬಾಲಕಿಯ ಕುಟುಂಬಸ್ಥರು ಕಲ್ಯಾಣ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಆರೋಪಿಯನ್ನು ಪತ್ತೆ ಹಚ್ಚಿ, ಬಂಧಿಸಲಾಗಿದೆ. ಆತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆಯ ತಲೆಗೆ ಏಟು ಬಿದ್ದಿದ್ದು, ಆಕೆಗೆ ಉಲ್ಲಾಸನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಅವರು ಮಾಹಿತಿ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.