ಸೋಮವಾರ, ಜನವರಿ 25, 2021
20 °C

ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ದಂಪತಿ ಮೇಲೆ ಗುಂಡಿನ ದಾಳಿ, ಪಾರು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಥಾಣೆ, ಮಹಾರಾಷ್ಟ್ರ: ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ದಂಪತಿಯನ್ನು ಭಾನುವಾರ ಬೆಳಗಿನ ಜಾವ ಇಬ್ಬರು ಅಪರಿಚಿತರು ಗುಂಡಿಕ್ಕಿ ಕೊಲ್ಲಲು ಯತ್ನಿಸಿದ್ದಾರೆ. ದಂಪತಿ ಯಾವುದೇ ಪೆಟ್ಟಿಲ್ಲದೇ ಅಪಾಯದಿಂದ ಪಾರಾಗಿದ್ದಾರೆ.

‘ಭಿವಂಡಿ ಸಮೀಪ ಕಲ್ಹೇರ್ ಗ್ರಾಮದಲ್ಲಿ ರಾತ್ರಿ 12.30 ಗಂಟೆಗೆ ಕೃತ್ಯ ನಡೆದಿದೆ. ಬೈಕ್‌ನಲ್ಲಿ ಬಂದ ಇಬ್ಬರು ಮೂರು ಸುತ್ತು ಗುಂಡು ಹಾರಿಸಿದ್ದಾರೆ’ ಎಂದು ನರ್ಪೊಲಿ ಠಾಣೆಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಜನವರಿ 15ರಂದು ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿ ದಂಪತಿ ನಾಮಪತ್ರ ಸಲ್ಲಿಸಿದ್ದರು. ಕೊಲೆಯತ್ನ ಮತ್ತು ಶಸ್ತ್ರಾಸ್ತ್ರ ಕಾಯ್ದೆಯನ್ವಯ ಈ ಕುರಿತು ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಇದುವರೆಗೂ ಯಾರನ್ನೂ ಬಂಧಿಸಲಾಗಿಲ್ಲ. ಶೂಟರ್‌ಗಳ ಬಂಧನಕ್ಕಾಗಿ ಶೋಧ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು