ಪಣಜಿ: ಮಹದಾಯಿ ನದಿಗೆ ಅಣೆಕಟ್ಟು ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ರಾಜ್ಯದ ಪ್ರತಿನಿಧಿಗಳಿರುವ ತಂಡ ಭೇಟಿ ನೀಡಲು ಅನುಮತಿ ನೀಡುವಂತೆ ಕೋರಿ ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ) ಶಾಸಕ ವಿಜಯ್ ಸರ್ದೇಸಾಯಿ ಅವರು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಭಾನುವಾರ ಪತ್ರ ಬರೆದಿದ್ದಾರೆ.

‘ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದ ವಿವಾದ ಕುರಿತ ಪ್ರಕರಣದ ವಿಚಾರಣೆ ಇನ್ನೂ ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿರುವಾಗ ಕರ್ನಾಟಕ ಅಣೆಕಟ್ಟು ನಿರ್ಮಿಸುವ ಕಾರ್ಯ ಕೈಗೆತ್ತಿಕೊಂಡಿದೆ’ ಎಂದು ಗೋವಾ ಇತ್ತೀಚೆಗೆ ಆರೋಪಿಸಿತ್ತು.

‘ಸುಪ್ರೀಂಕೋರ್ಟ್‌ನ ಮಾರ್ಗಸೂಚಿ ಪ್ರಕಾರ ರಚಿತವಾದ ಜಂಟಿ ಪರಿಶೀಲನಾ ತಂಡ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಲು ಅನುಮತಿ ನೀಡಬೇಕು. ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಈ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಗೌರವಿಸಲಿದೆ ಎಂಬ ಭರವಸೆ ಹೊಂದಿದ್ದೇವೆ’ ಎಂದೂ ಅವರು ಪತ್ರದಲ್ಲಿ ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.