ಅಹ್ಮದ್‌ನಗರ ಜಿಲ್ಲಾ ಆಸ್ಪತ್ರೆಯ ಐಸಿಯುಗೆ ಬೆಂಕಿ: 10 ಕೋವಿಡ್ ರೋಗಿಗಳ ದುರ್ಮರಣ

ಪುಣೆ: ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲಾ ಆಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಸಿವಿಲ್ ಆಸ್ಪತ್ರೆಯ ಐಸಿಯುಗೆ ಬೆಂಕಿ ಬಿದ್ದು 10 ರೋಗಿಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ರೋಗಿಯು ಗಂಭೀರವಾಗಿದ್ದಾರೆ,’ ಎಂದು ಅಹ್ಮದ್‌ನಗರ ಜಿಲ್ಲಾಧಿಕಾರಿ ರಾಜೇಂದ್ರ ಭೋಸಲೆ ಖಚಿತಪಡಿಸಿದ್ದಾರೆ.
Maharashtra | A total of 10 people died in a fire incident at Ahmednagar District Hospital, said District Collector Rajendra Bhosale pic.twitter.com/zrUnAMKNMj
— ANI (@ANI) November 6, 2021
ಬೆಂಕಿ ಬಿದ್ದ ಐಸಿಯುನಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಬೆಳಗ್ಗೆ 11 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಹ್ಮದ್‌ನಗರ ಮುನ್ಸಿಪಲ್ ಕಾರ್ಪೊರೇಷನ್‌ನ ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಶಂಕರ್ ಮಿಸಾಲ್ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.