ಮುಂಬೈ: ಮಹಾರಾಷ್ಟ್ರದ ಬೋಯಿಸಾರ್ನ ಕಾರ್ಖಾನೆಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಸ್ಫೋಟದಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೋಯಿಸಾರ್ ಕೈಗಾರಿಕಾ ಪ್ರದೇಶದಲ್ಲಿ ಸ್ಥಿತಗೊಂಡಿರುವ ಜಖರಿಯಾ ಫ್ಯಾಬ್ರಿಕ್ ಲಿಮಿಟೆಡ್ನಲ್ಲಿ ಶನಿವಾರ ಬೆಳಗ್ಗೆ 6 ಗಂಟೆ ವೇಳೆಗೆ ಸ್ಫೋಟ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಇದನ್ನೂ ಓದಿ:ಗೋವು ಆಮ್ಲಜನಕ ಹೀರಿ, ಅದನ್ನೇ ಬಿಡುತ್ತೆ ಎಂಬುದು ವಿಜ್ಞಾನಿಗಳ ನಂಬಿಕೆ: ಹೈಕೋರ್ಟ್

ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆಗೆ ನೇತೃತ್ವ ವಹಿಸಿದ್ದಾರೆ.

ಸ್ಫೋಟದಿಂದಾಗಿ ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ತಕ್ಷಣಕ್ಕೆ ಘಟನೆ ಹಿಂದಿನ ಕಾರಣಗಳು ತಿಳಿದು ಬಂದಿಲ್ಲ.

ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.