ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಮನೆ–ಅಂಗಡಿಗೆ ಬೆಂಕಿ, ಒಂದೇ ಕುಟುಂಬದ ನಾಲ್ವರ ಸಾವು

Last Updated 29 ಮಾರ್ಚ್ 2021, 6:29 IST
ಅಕ್ಷರ ಗಾತ್ರ

ಫಾಲ್ಘರ್‌:ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯ ಮೊಖಡ ತಾಲ್ಲೂಕಿನ ಬ್ರಹ್ಮನ್‌ಗಾಂವ್‌ ಹಳ್ಳಿಯಲ್ಲಿ ಅಂಗಡಿ ಮತ್ತು ನಿವಾಸ ಒಟ್ಟಿಗಿರುವ ಕಟ್ಟಡದಲ್ಲಿ ಸೋಮವಾರ ನಸುಕಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟು, ಇತರೆ ಮೂವರು ಗಾಯಗೊಂಡಿದ್ದಾರೆ.

ಮೃತಪಟ್ಟವರಲ್ಲಿ ಅಂಗಡಿಯ ಮಾಲೀಕರ ಪತ್ನಿ, ತಾಯಿ ಮತ್ತು 10 ರಿಂದ 15 ವಯೋಮಾನದ ಇಬ್ಬರು ಮಕ್ಕಳು ಸೇರಿದ್ದಾರೆ.

‘ಘಟನೆಯಲ್ಲಿ ಅಂಗಡಿ ಮಾಲೀಕ ಮತ್ತು ಇಬ್ಬರು ಮಕ್ಕಳಿಗೆ ತೀವ್ರವಾಗಿ ಸುಟ್ಟ ಗಾಯಗಳಾಗಿವೆ. ಅವರನ್ನು ನಾಸಿಕ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ‘ ಎಂದು ಮೊಖಡ ಪೊಲೀಸ್ ಠಾಣೆ ಸಿಬ್ಬಂದಿ ತಿಳಿಸಿದ್ದಾರೆ.

ವಿದ್ಯುತ್ ಶಾರ್ಟ್‌ ಸರ್ಕೀಟ್‌ನಿಂದಾಗಿ ಈ ಬೆಂಕಿ ಅವಘಡ ಸಂಭವಿಸಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿ ವಿವೇಕಾನಂದ್ ಕದಮ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT