ಮಹಾರಾಷ್ಟ್ರ: ರಾಸಾಯನಿಕ ಕಾರ್ಖಾನೆಯ ಘಟಕದಲ್ಲಿ ಸ್ಫೋಟ; ಐವರಿಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐವರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೊಯಿಸಾರ್ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಘಟಕದಲ್ಲಿ ಶನಿವಾರ ರಾತ್ರಿ ಸುಮಾರು 11.30ರ ವೇಳೆಗೆ ಸ್ಫೋಟ ಸಂಭವಿಸಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಇದನ್ನೂ ಓದಿ: ಛತ್ತೀಸಗಡ: ಗಣಿ ಪ್ರದೇಶದಲ್ಲಿ ನಕ್ಸಲರ ದಾಳಿ, ನಾಲ್ಕು ವಾಹನಗಳಿಗೆ ಬೆಂಕಿ
ಸ್ಫೋಟದಿಂದಾಗಿ ಐವರು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬೊಯಿಸರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಫೋಟದ ಹಿಂದಿನ ಕಾರಣಗಳು ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.