ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ಎಟಿಎಸ್‌ನಿಂದ 4 ಪಿಎಫ್‌ಐ ಸದಸ್ಯರ ಬಂಧನ

Last Updated 20 ಅಕ್ಟೋಬರ್ 2022, 5:51 IST
ಅಕ್ಷರ ಗಾತ್ರ

ಮುಂಬೈ: ರಾಯಗಢ ಜಿಲ್ಲೆಯ ಪನ್ವೇಲ್‌ನಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ನಾಲ್ವರು ಸದಸ್ಯರನ್ನು ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳವು (ಎಟಿಎಸ್) ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಬಂಧಿತರಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಯ ಸ್ಥಳೀಯ ಘಟಕದ ಕಾರ್ಯದರ್ಶಿ, ರಾಜ್ಯ ವಿಸ್ತರಣಾ ಸಮಿತಿಯ ಸದಸ್ಯರು ಸೇರಿದ್ದಾರೆ.

ಕೇಂದ್ರ ಸರ್ಕಾರವು ಸಂಘಟನೆ ಮೇಲೆ ನಿಷೇಧ ಹೇರಿದ್ದರೂ ಮುಂಬೈಯಿಂದ 50 ಕಿ.ಮೀ. ದೂರದಲ್ಲಿರುವ ಪನ್ವೇಲ್‌ನಲ್ಲಿ‌ ಪಿಎಫ್‌ಐ ಸದಸ್ಯರು ಸಭೆ ಸೇರಿದ್ದರು. ಬಳಿಕ ಶೋಧ ಕಾರ್ಯಾಚರಣೆ ನಡೆಸಿರುವ ಎಟಿಎಸ್, ಪಿಎಫ್‌ಐ ಸದಸ್ಯರನ್ನು ಬಂಧಿಸಿದೆ.

ಕಳೆದ ತಿಂಗಳು ಐಸಿಸ್‌ನಂತಹ ಜಾಗತಿಕ ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಪಿಎಫ್‌ಐ ಸೇರಿದಂತೆ ಬೆಂಬಲಿತ ಸಂಘಟನೆಗಳ ಮೇಲೆ ಕೇಂದ್ರ ಸರ್ಕಾರ ಐದು ವರ್ಷಗಳ ನಿಷೇಧ ಹೇರಿತ್ತು. ಅಲ್ಲದೆ ದೇಶದ ಹಲವು ರಾಜ್ಯಗಳಲ್ಲಿ ನಡೆಸಿದ ದಾಳಿಯಲ್ಲಿ 250ಕ್ಕೂ ಹೆಚ್ಚು ಸದಸ್ಯರನ್ನು ವಶಕ್ಕೆ ಪಡೆಯಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT