ಶನಿವಾರ, ಆಗಸ್ಟ್ 13, 2022
27 °C

ಔರಂಗಾಬಾದ್‌ಗೆ ಸಂಭಾಜಿನಗರ, ಉಸ್ಮಾನಾಬಾದ್‌ಗೆ ಧರಶಿವ ಎಂದು ಮರುನಾಮಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರದ ಔರಂಗಾಬಾದ್‌ ಹಾಗೂ ಉಸ್ಮಾನಾಬಾದ್‌ ನಗರಗಳ ಹೆಸರನ್ನು ಬದಲಿಸಿ ಶಿವಸೇನಾ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದೆ.

ಔರಂಗಾಬಾದ್‌ ಅನ್ನು ಸಂಭಾಜಿನಗರವೆಂದೂ, ಉಸ್ಮಾನಾಬಾದ್‌ ಅನ್ನು ಧರಶಿವ ಎಂದು ಮರುನಾಮಕರಣ ಮಾಡಲಾಗಿದೆ.

ನವಿ ಮುಂಬೈ ವಿಮಾನ ನಿಲ್ದಾಣಕ್ಕೆ ಡಿ.ಬಿ.ಪಾಟೀಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲು ಮಹಾರಾಷ್ಟ್ರ ಸಚಿವ ಸಂಪುಟವು ಸಮ್ಮತಿಸಿದೆ.

ಮಹಾರಾಷ್ಟ್ರದ ರಾಜಕೀಯ ಅಸ್ಥಿರತೆಯ ನಡುವೆಯೇ ಶಿವಸೇನಾ ನೇತೃತ್ವದ ಸರ್ಕಾರ ಈ ನಿರ್ಧಾರಗಳನ್ನು ಕೈಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು