ಸೋಮವಾರ, ಆಗಸ್ಟ್ 8, 2022
23 °C

ಮಹಾರಾಷ್ಟ್ರದಲ್ಲಿ ನಗರಗಳ ಮರುನಾಮಕರಣ: ನಗು ತಡೆಯಲಾಗುತ್ತಿಲ್ಲ ಎಂದ ಸಿ.ಟಿ.ರವಿ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರದಲ್ಲಿ ಎರಡು ನಗರಗಳ ಮರುನಾಮಕರಣ ಮಾಡಿ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ. 

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಬಿಜೆಪಿ ಮುಖಂಡ ಸಿ.ಟಿ.ರವಿ, ‘ಮಹಾ ವಸೂಲಿ ಆಘಾಡಿ ಸರ್ಕಾರ ತೆಗೆದುಕೊಂಡ ನಿರ್ಧಾರವು ತೀವ್ರ ನಗು ತರಿಸಿದೆ. ಅದನ್ನು ತಡೆಯಲು ಸಾಧ್ಯವಾಗುತ್ತಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ. 

‘ಕಳೆದ ಮೂರು ವರ್ಷಗಳಿಂದ ಜಾತ್ಯತೀತ ರಾಜಕಾರಣದಲ್ಲಿ ಉದ್ಧವ್‌ ಠಾಕ್ರೆ ತೊಡಗಿಸಿಕೊಂಡಿದ್ದರು. ತಮ್ಮ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ಹಿಂದುತ್ವದ ರುಜುವಾತುಗಳನ್ನು ಸಾಬೀತುಪಡಿಸಲು ಯತ್ನಿಸುತ್ತಿದ್ದಾರೆ’ ಎಂದು ಸಿ.ಟಿ.ರವಿ ಟೀಕಿಸಿದ್ದಾರೆ. 

ಮಹಾರಾಷ್ಟ್ರದ ಔರಂಗಾಬಾದ್‌ ಹಾಗೂ ಉಸ್ಮಾನಾಬಾದ್‌ ನಗರಗಳ ಹೆಸರನ್ನು ಬದಲಿಸಿ ಶಿವಸೇನಾ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದೆ. ಔರಂಗಾಬಾದ್‌ ಅನ್ನು ಸಂಭಾಜಿನಗರವೆಂದೂ, ಉಸ್ಮಾನಾಬಾದ್‌ ಅನ್ನು ಧರಶಿವ ಎಂದು ಮರುನಾಮಕರಣ ಮಾಡಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು