ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾದಿ ಮುಹಮ್ಮದ್ ಅವಹೇಳನ: ಬಿಜೆಪಿಯ ನೂಪುರ್ ಶರ್ಮಾ ವಿರುದ್ಧ ಪ್ರಕರಣ

Last Updated 30 ಮೇ 2022, 16:29 IST
ಅಕ್ಷರ ಗಾತ್ರ

ಮುಂಬೈ: ಟೆಲಿವಿಷನ್ ಸಂವಾದದಲ್ಲಿ ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ವಿರುದ್ಧ ಮಹಾರಾಷ್ಟ್ರದ ಥಾಣೆ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೂಪುರ್ ಶರ್ಮಾ ವಿರುದ್ಧ ಐಪಿಸಿ ಸೆಕ್ಷನ್ 298, 294, 153ಎ ಮತ್ತು 505ಬಿ ಅಡಿಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಇತರ ಅಪರಾಧಗಳ ಆರೋಪದಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಮುಂಬ್ರಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಶೋಕ್ ಕಡ್ಲಾಗ್ ತಿಳಿಸಿದ್ದಾರೆ.

ಈ ಮೊದಲು ಭಿವಂಡಿಯಲ್ಲಿ ನಡೆದ ಸಮಾವೇಶದಲ್ಲಿ ನೂಪುರ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆಗ್ರಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT