ಮಂಗಳವಾರ, ಸೆಪ್ಟೆಂಬರ್ 28, 2021
25 °C

ಮಹಾರಾಷ್ಟ್ರ: ಬ್ಲಾಯರ್‌ ಸ್ಫೋಟದಿಂದಾಗಿ ಗೋಡೆ ಕುಸಿತ, ಕಾರ್ಮಿಕ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಾಲ್ಘರ್‌: ‘ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಬಾಯ್ಲರ್‌ ಸ್ಪೋಟದಿಂದಾಗಿ ಫ್ಯಾಕ್ಟರಿಯೊಂದರ ಗೋಡೆ ಕುಸಿದ ಪರಿಣಾಮ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ’ ಎಂದು ಪೊಲೀಸರು ಭಾನುವಾರ ತಿಳಿಸಿದರು.

‘ಈ ಘಟನೆಯು ವಾಲಿವ್‌ ಪ್ರದೇಶದಲ್ಲಿ ಶನಿವಾರ ನಡೆದಿದ್ದು, ಇಲ್ಲಿನ ಎಂಜಿನಿಯರಿಂಗ್ ಘಟಕವೊಂದರಲ್ಲಿ ಬಾಯ್ಲರ್‌ ಸ್ಪೋಟಗೊಂಡಿದೆ. ಈ ಪ್ರಬಲ ಸ್ಪೋಟದಿಂದಾಗಿ ಪಕ್ಕದಲ್ಲಿದ್ದ ಫ್ಯಾಕ್ಟರಿಯ ಗೋಡೆ ಕುಸಿದಿದೆ’ ಎಂದು ಅವರು ಹೇಳಿದರು

‘ಈ ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಸ್ಥಳೀಯ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಮೃತ ಕಾರ್ಮಿಕನನ್ನು ಮೆಹಮೂದ್‌ ಮೊಹಮ್ಮದ್‌ ಖಾನ್‌(18) ಎಂದು ಗುರುತಿಸಲಾಗಿದೆ. ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವಾಲಿವ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ’ ಎಂದು ಪೊಲೀಸರು ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು