ಬುಧವಾರ, ಸೆಪ್ಟೆಂಬರ್ 28, 2022
27 °C

ಸರ್ಕಾರ ರಚನೆಯಾಗಿ 40 ದಿನಗಳ ನಂತರ ಇಂದು ‘ಮಹಾ’ ಸಂಪುಟ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಏಕನಾಥ ಶಿಂದೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಬಹುನಿರೀಕ್ಷಿತ ಸಂಪುಟ ವಿಸ್ತರಣೆ  ಮಂಗಳವಾರ ನಡೆಯಲಿದೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

‘ಮಂಗಳವಾರ ಮುಂಬೈನಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ. ಸಚಿವ ಸಂಪುಟದಲ್ಲಿ ಯಾರೆಲ್ಲಾ ಇರುತ್ತಾರೆ ಎಂಬುದರ ಬಗ್ಗೆ ಯಾವುದೇ ವಿವರಗಳನ್ನು ಬಹಿರಂಗಪಡಿಸಲಾರೆ’ ಎಂದು ಅವರು ಹೇಳಿದ್ದಾರೆ.

ಸಂಪುಟ ವಿಸ್ತರಣೆ ಕುರಿತು ಶಿಂದೆ, ಫಡಣವೀಸ್‌ ಇತ್ತೀಚೆಗೆ ಹಲವು ಬಾರಿ ದೆಹಲಿಗೆ ಭೇಟಿ ನೀಡಿದ್ದರು. 

ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿದ್ದ ಮಹಾ ವಿಕಾಸ ಆಘಾಡಿ (ಶಿವಸೇನಾ, ಕಾಂಗ್ರೆಸ್‌ ಮತ್ತು ಎನ್‌ಸಿಪಿ) ಸರ್ಕಾರದ ವಿರುದ್ಧ ಶಿಂದೆ ನೇತೃತ್ವದಲ್ಲಿ ಶಿವಸೇನಾದ ಹಲವು ಶಾಸಕರು ಬಂಡಾಯ ಸಾರಿದ್ದರು. ಬಳಿಕ, ಶಿಂದೆ ಅವರು ಬಿಜೆಪಿ ಬೆಂಬಲದೊಂದಿಗೆ ಜೂನ್‌ 30ರಂದು ಮುಖ್ಯಮಂತ್ರಿಯಾಗಿ, ಫಡಣವೀಸ್‌ ಉಪಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು