ಗುರುವಾರ , ಮೇ 26, 2022
24 °C

ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿಗೆ ಶೇ 27 ಮೀಸಲಾತಿಗೆ ತಡೆ ಪ್ರಶ್ನಿಸಿದ ಮಹಾರಾಷ್ಟ್ರ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇತರೆ ಹಿಂದುಳಿದ ವರ್ಗಗಳು ಅಥವಾ ಒಬಿಸಿಗೆ ಶೇ 27ರಷ್ಟು ಮೀಸಲಾತಿ ಆದೇಶಕ್ಕೆ ತಡೆ ವಿಧಿಸಿ ಡಿಸೆಂಬರ್ 15ರಂದು ನ್ಯಾಯಾಲಯ ನೀಡಿದ್ದ ಆದೇಶವನ್ನು ಹಿಂಪಡೆಯುವಂತೆ ಕೋರಿ ಮಹಾರಾಷ್ಟ್ರ ಸರಕಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.

ಒಬಿಸಿಗೆ ನೀಡಲಾಗಿದ್ದ ಶೇ 27 ರಷ್ಟು ಮೀಸಲಾತಿಯನ್ನು ಸಾಮಾನ್ಯ ವರ್ಗಕ್ಕೆ ಮರಳಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.

ಕೋಟಾವನ್ನು ನೀಡುವಾಗ ರಾಜ್ಯ ಸರ್ಕಾರವು‘ಟ್ರಿಪಲ್ ಟೆಸ್ಟ್ಸ್’ಕಡ್ಡಾಯ ಮಾನದಂಡಗಳನ್ನು ಅನುಸರಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

‘ಟ್ರಿಪಲ್ ಟೆಸ್ಟ್’ಮಾರ್ಗಸೂಚಿಗಳ ಗುಚ್ಛವನ್ನು ಉಲ್ಲೇಖಿಸುತ್ತವೆ. ಇವುಗಳಲ್ಲಿ ಒಂದು ರಾಜ್ಯದೊಳಗೆ ಮೀಸಲಾತಿ ಹೆಚ್ಚಿಸುವ ಮೊದಲು ಪ್ರಾಯೋಗಿಕ ವಿಚಾರಣೆ ನಡೆಸಲು ಆಯೋಗದ ಸ್ಥಾಪನೆ ಮಾಡುವುದೂ ಸೇರಿದೆ.

ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಒಬಿಸಿಗಳಿಗೆ ಮೀಸಲಾದ ಒಟ್ಟು ಶೇಕಡ 50 ರಷ್ಟನ್ನು ಮೀರುವಂತಿಲ್ಲ ಎಂದು ಕಳೆದ ವರ್ಷ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು.

ಇದೀಗ, ಮಹಾರಾಷ್ಟ್ರ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 19ರಂದು ನಡೆಸಲಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು