ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಮುಖಂಡರ ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ಶಿಂದೆ ಸರ್ಕಾರ ನಿರ್ಧಾರ

Last Updated 27 ಜುಲೈ 2022, 14:30 IST
ಅಕ್ಷರ ಗಾತ್ರ

ಮುಂಬೈ: ಕಾನೂನು ನಿಯಮಗಳನ್ನು ಉಲ್ಲಂಘಿಸಿ ಸಾಮಾಜಿಕ ಆಂದೋಲನಗಳನ್ನು ಹಮ್ಮಿಕೊಂಡಿದ್ದಕ್ಕೆ ಸಂಬಂಧಿಸಿ ಮಾರ್ಚ್ 2022 ರವರೆಗೆ ಸಾಮಾಜಿಕ ಕಾರ್ಯಕರ್ತರು ಹಾಗೂ ರಾಜಕೀಯ ಮುಖಂಡರ ವಿರುದ್ಧ ದಾಖಲಾಗಿದ್ದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ಇಂದು (ಬುಧವಾರ)ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಏಕನಾಥ ಶಿಂದೆ, ‘ಗಣೇಶ ಉತ್ಸವ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ’ ಎಂದು ತಿಳಿಸಿದ್ದಾರೆ.

‘ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಪ್ರಕರಣಗಳನ್ನು ಸಹ ಹಿಂಪಡೆಯಲಾಗುವುದು. ಮಂಕಿಪಾಕ್ಸ್‌ ಸೋಂಕು ಹರಡುವಿಕೆಯ ಬಗ್ಗೆ ಆರೋಗ್ಯ ಇಲಾಖೆ ಹೆಚ್ಚಿ ನಿಗಾ ವಹಿಸಿದೆ. ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ’ ಎಂದು ಶಿಂದೆ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT