ಸೋಮವಾರ, ಆಗಸ್ಟ್ 8, 2022
22 °C

‌‌‘ಮಹಾ’ಬಂಡಾಯ: ಏಕನಾಥ್ ಶಿಂಧೆ ಖಾತೆ ಹಿಂಪಡೆದ ಸಿಎಂ ಉದ್ಧವ್ ಠಾಕ್ರೆ

ಮೃತ್ಯುಂಜಯ ಬೋಸ್‌ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ಬಂಡೆದ್ದಿರುವ ಸಚಿವರ ವಿರುದ್ಧ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮೊದಲ ಕ್ರಮ ಕೈಗೊಂಡಿದ್ದಾರೆ.

ಬಂಡಾಯ ಶಾಸಕರ ನಾಯಕ ಏಕನಾಥ್ ಶಿಂಧೆ ಮತ್ತು ಇತರ ಸಚಿವರ ಖಾತೆಗಳನ್ನು ಹಿಂಪಡೆದಿರುವ ಉದ್ಧವ್, ಮಂತ್ರಿ ಪರಿಷತ್ತಿನ ಇತರೆ ಸಚಿವರಿಗೆ ಹಂಚಿಕೆ ಮಾಡಿದ್ದಾರೆ.

ಶಿಂಧೆ ಅವರ ನಗರಾಭಿವೃದ್ಧಿ ಮತ್ತು ಸಾರ್ವಜನಿಕ ಕಾರ್ಯಗಳ ಖಾತೆಯನ್ನು ಶಿವಸೇನೆಯ ಹಿರಿಯ ಮುಖಂಡ ಸುಭಾಷ್ ದೇಸಾಯಿ ಅವರಿಗೆ ಹಂಚಿಕೆ ಮಾಡಲಾಗಿದೆ. ಗುಲಾಬ್ ರಾವ್ ಪಾಟೀಲ್ ಅವರ ನೀರು ಸರಬರಾಜು ಮತ್ತು ನೈರ್ಮಲ್ಯ ಖಾತೆಯನ್ನು ಅನಿಲ್ ಪರಬ್ ಅವರಿಗೆ ಹಸ್ತಾಂತರಿಸಲಾಗಿದೆ.

ಏಕನಾಥ್ ಶಿಂಧೆ ಮತ್ತು ಗುಲಾಬ್ ರಾವ್ ಅವರು ಈಗ ಖಾತೆ ಇಲ್ಲದ ಸಚಿವರಾಗಿದ್ದಾರೆ.

ಇವನ್ನೂ ಓದಿ..

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು