ಸೋಮವಾರ, ಆಗಸ್ಟ್ 8, 2022
25 °C

‘ಮಹಾ’ ಬಂಡಾಯ: ಮಧ್ಯಾಹ್ನ ಸಚಿವ ಸಂಪುಟ ಸಭೆ ಕರೆದ ಸಿಎಂ ಉದ್ಧವ್ ಠಾಕ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಸಚಿವ ಏಕನಾಥ ಶಿಂಧೆ ನೇತೃತ್ವದಲ್ಲಿ ಬಂಡಾಯ ಎದ್ದಿರುವ 16 ಶಾಸಕರ ಅನರ್ಹತೆಯ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್‌ ಅಮಾನತಿನಲ್ಲಿಟ್ಟ ಬೆನ್ನಲ್ಲೇ ಇಂದು ಮಧ್ಯಾಹ್ನ 2.30ಕ್ಕೆ ಸಿಎಂ ುದ್ಧವ್ ಠಾಕ್ರೆ ಸಚಿವ ಸಂಪುಟ ಸಭೆ ಕರೆದಿದ್ದಾರೆ.

ಕೋವಿಡ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉದ್ಧವ್ ವರ್ಚವಲ್ ಆಗಿ ಸಭೆ ನಡೆಸಲಿದ್ದು, ಡಿಸಿಎಂ ಅಜಿತ್ ಪವಾರ್ ಸಹ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಲಿದ್ದಾರೆ ಎಂದು ಎಎನ್‌ಐ ಮೂಲಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿದೆ. 

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಸಚಿವ ಏಕನಾಥ ಶಿಂಧೆ ನೇತೃತ್ವದಲ್ಲಿ ಬಂಡಾಯ ಎದ್ದಿರುವ 16 ಶಾಸಕರ ಅನರ್ಹತೆಯ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ಅಮಾನತಿನಲ್ಲಿ ಇರಿಸಿತ್ತು.

ಅನರ್ಹತೆಗೆ ಸಂಬಂಧಿಸಿ ಡೆಪ್ಯುಟಿ ಸ್ಪೀಕರ್ ನೀಡಿರುವ ನೋಟಿಸ್‌ಗೆ ಪ್ರತಿಕ್ರಿಯೆ ನೀಡಲು ಜುಲೈ 12ರವರೆಗೆ ಸಮಯಾವಕಾಶ ಕೊಟ್ಟಿದೆ. ನೋಟಿಸ್‌ಗೆ ಪ್ರತಿಕ್ರಿಯೆ ನೀಡಲು ಶಾಸಕರಿಗೆ ಉಪಸ್ಪೀಕರ್‌ ಸೋಮವಾರ ಸಂಜೆ 5.30ರವರೆಗೆ ಸಮಯ ಕೊಟ್ಟಿದ್ದರು.

ವಾದ–ಪ್ರತಿವಾದಗಳನ್ನು ಆಲಿಸಿ ಒಂದು ನಿರ್ಧಾರಕ್ಕೆ ಬರುವುದಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳುವ ಅಗತ್ಯ ಇದೆ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ಜೆ.ಬಿ. ಪರ್ದಿವಾಲಾ ಅವರು ಪೀಠವು ಹೇಳಿದೆ. 

‘ಅನರ್ಹತೆ ವಿಚಾರದಲ್ಲಿ ಕ್ರಮ ಕೈಗೊಳ್ಳಲು ಉಪಸ್ಪೀಕರ್‌ಗೆ ಅಧಿಕಾರ ಇದೆಯೇ ಎಂಬುದನ್ನು ಪರಿಶೀಲಿಸ ಬೇಕಿದೆ’ ಎಂದು ಪೀಠವು ಹೇಳಿದೆ. 

ಇವನ್ನೂ ಓದಿತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು