ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಿದ್ದಲು ಸರಬರಾಜು ಮಾಡುವ ಕಂಪನಿ ಆಯ್ಕೆಯಲ್ಲಿ ಅಕ್ರಮ: ನಾನಾ ಪಟೋಲೆ ಆರೋಪ

Last Updated 2 ಜುಲೈ 2021, 9:14 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರ ರಾಜ್ಯ ವಿದ್ಯುತ್ ಉತ್ಪಾದನಾ ಕಂಪನಿಗೆ ಕಲ್ಲಿದ್ದಲು ಸರಬರಾಜು ಮಾಡಲು ಖಾಸಗಿ ಕಂಪನಿಯೊಂದರ ಆಯ್ಕೆ ವೇಳೆ ಅವ್ಯವಹಾರ ನಡೆದಿದೆ ಎಂದು ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷ ನಾನಾ ಪಟೋಲೆ ಆರೋಪಿಸಿದ್ದಾರೆ.

‘ರುಕ್ಮಾಯಿ ಇನ್ಫ್ರಾಸ್ಟ್ರಕ್ಚರ್ಸ್‌ ಎಂಬ ಕಂಪನಿಯನ್ನು ಕಲ್ಲಿದ್ದಲು ಪೂರೈಕೆಗೆ ಆಯ್ಕೆ ಮಾಡಲಾಗಿದೆ. ಈ ಕಂಪನಿ ನಿಗದಿತ ಮಾನದಂಡಗಳನ್ನು ಪೂರೈಸುವುದಿಲ್ಲ. ಹೀಗಾಗಿ ಈ ಆಯ್ಕೆ ಪ್ರಕ್ರಿಯೆ ಕುರಿತು ತನಿಖೆ ನಡೆಸಬೇಕು’ ಎಂದು ಅವರು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ಜೂನ್‌ 26ರಂದು ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ರುಕ್ಮಾಯಿ ಇನ್ಫ್ರಾಸ್ಟ್ರಕ್ಚರ್ಸ್‌ ಪಾಲುದಾರಿಕೆ ಕಂಪನಿಯೊಂದನ್ನು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್‌ಸಿಎಲ್‌ಟಿ) ಕಪ್ಪು ಪಟ್ಟಿಗೆ ಸೇರಿಸಿದೆ. ಕಂಪನಿಗೆ ಈ ಕ್ಷೇತ್ರದಲ್ಲಿ ಅನುಭವವೂ ಇಲ್ಲ ಎಂದು ಅವರು ಪತ್ರದಲ್ಲಿ ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT