ಗುರುವಾರ , ಮೇ 26, 2022
29 °C

14 ವರ್ಷ ಹಿಂದಿನ ಪ್ರಕರಣದಲ್ಲಿ ರಾಜ್ ಠಾಕ್ರೆ ವಿರುದ್ಧ ಜಾಮೀನು ರಹಿತ ವಾರಂಟ್

ಪಿಟಿಐ Updated:

ಅಕ್ಷರ ಗಾತ್ರ : | |

ಸಾಂಗ್ಲಿ: 14 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ ವಿರುದ್ಧ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ರಾಜ್ ಠಾಕ್ರೆ ವಿರುದ್ಧ 2008ರಲ್ಲಿ ಭಾರತೀಯ ದಂಡಸಂಹಿತೆಯ ಸೆಕ್ಷನ್ 109 ಹಾಗೂ 117 (ಅಪರಾಧ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದಕ್ಕೆ ಸಂಬಂಧಿಸಿ ಸಾಂಗ್ಲಿಯ ಮ್ಯಾಜಿಸ್ಟ್ರೇಟರು ಜಾಮೀನು ರಹಿತ ವಾರಂಟ್ ಹೊರಡಿಸಿದ್ದಾರೆ. ರಾಜ್ ಠಾಕ್ರೆ ಹಾಗೂ ಎಂಎನ್‌ಎಸ್ ನಾಯಕ ಶಿರೀಶ್ ಪರಾಕರ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಮುಂಬೈ ಪೊಲೀಸ್ ಆಯುಕ್ತರಿಗೆ ಹಾಗೂ ಖೆರ್‌ವಾಡಿ ಪೊಲೀಸ್ ಠಾಣೆಗೆ ಸೂಚಿಸಿದ್ದಾರೆ ಎಂದು ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಜ್ಯೋತಿ ಪಾಟೀಲ್ ತಿಳಿಸಿದ್ದಾರೆ.

ಜೂನ್ 8ರ ಒಳಗಾಗಿ ಇಬ್ಬರೂ ನಾಯಕರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಲಾಗಿದೆ.

ಈ ಮಧ್ಯೆ, 2012ಕ್ಕೂ ಮೊದಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂಬ ಸರ್ಕಾರಿ ನಿಯಮವಿದೆ ಎಂದು ಎಂಎನ್‌ಎಸ್ ಸ್ಥಳೀಯ ನಾಯಕರೊಬ್ಬರು ಪ್ರತಿಪಾದಿಸಿದ್ದಾರೆ.

ಮಸೀದಿಗಳ ಧ್ವನಿವರ್ಧಕಗಳನ್ನು ತೆರವುಗೊಳಿಸಬೇಕೆಂದು ರಾಜ್ ಠಾಕ್ರೆ ಆಗ್ರಹಿಸಿರುವ ವಿಚಾರ ಚರ್ಚೆಯಾಗುತ್ತಿರುವ ಬೆನ್ನಲ್ಲೇ 2008ರ ಪ್ರಚೋದನಾಕಾರಿ ಭಾಷಣ ವಿಚಾರವೂ ಮುನ್ನೆಲೆಗೆ ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು