ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಹರಡುವಿಕೆ ತಡೆಗೆ ಘೋಷಿಸಲಾಗಿರುವ ಲಾಕ್ಡೌನ್ ಅನ್ನು ಏಪ್ರಿಲ್ 30ರ ಬಳಿಕವೂ 15 ದಿನ ವಿಸ್ತರಿಸಲಾಗುವುದು ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಬುಧವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾಗಿಯಾದ ಎಲ್ಲರೂ ಲಾಕ್ಡೌನ್ ವಿಸ್ತರಿಸುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.

ಓದಿ:ಮಹಾರಾಷ್ಟ್ರದಲ್ಲಿ 18ರಿಂದ 44ರ ವಯೋಮಾನದವರಿಗೆ ಮೇ 1ರಿಂದಲೇ ಲಸಿಕೆ ಸಿಗಲ್ಲ

ಕೋವಿಡ್ ಪ್ರಕರಣಗಳು ವಿಪರೀತವಾಗಿ ಹೆಚ್ಚುತ್ತಿರುವ ಕಾರಣ ಮಹಾರಾಷ್ಟ್ರ ಸರ್ಕಾರವು ಏಪ್ರಿಲ್ 4ರಿಂದ ವಾರಾಂತ್ಯ ಲಾಕ್ಡೌನ್ ಮತ್ತು ವಾರದ ದಿನಗಳಲ್ಲಿ ರಾತ್ರಿ ಸಂಚಾರ ನಿರ್ಬಂಧಿಸಿ ಆದೇಶ ಹೊರಡಿಸಿತ್ತು. ಖಾಸಗಿ ಕಚೇರಿಗಳು, ಸಲೂನ್ಗಳು, ಚಿತ್ರಮಂದಿರಗಳನ್ನು ಮುಚ್ಚುವಂತೆ ಸೂಚಿಸಿತ್ತು.

ಸದ್ಯ ವಾರಾಂತ್ಯ ಲಾಕ್ಡೌನ್ ಶುಕ್ರವಾರ ರಾತ್ರಿ 8 ಗಂಟೆಗೆ ಆರಂಭಗೊಂಡು ಸೋಮವಾರ ಬೆಳಿಗ್ಗೆ 7 ಗಂಟೆವರೆಗೆ ಜಾರಿಯಲ್ಲಿದೆ.

ಓದಿ:ಮಹಾರಾಷ್ಟ್ರ: 18ರಿಂದ 44 ವರ್ಷದೊಳಗಿನವರಿಗೆ ಕೋವಿಡ್ ಲಸಿಕೆ ಉಚಿತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.